ಮೆಲ್ಬೋರ್ನ್: ನ್ಯೂಜಿಲೆಂಡ್ನ ಪ್ರಧಾನಿ ಜಸಿಂದಾ ಆಡ್ರೆನ್ ಅವರ ಸಚಿವ ಸಂಪುಟದಲ್ಲಿ ಭಾರತೀಯ ಮೂಲದ ಮಹಿಳೆ ಪ್ರಿಯಾಂಕಾ ರಾಧಾಕೃಷ್ಣನ್ ಅವರು ಸ್ಥಾನ ಪಡೆದಿದ್ದು, ನ್ಯೂಜಿಲೆಂಡ್ ಸರ್ಕಾರದ ಸಚಿವರಾದ ಮೊದಲ ಭಾರತೀಯ ಮೂಲದವರ ಎಂಬ ಕೀರ್ತಿಗೆ ಪಾತ್ರರಾಗಿದ್ದಾರೆ.
ಅಲ್ಲಿನ ಪ್ರಧಾನ ಮಂತ್ರಿಯಾಗಿ ಜಸಿಂದಾ ಅವರು ಅಧಿಕಾರ ವಹಿಸಿಕೊಂಡ ಬಳಿಕ ಐವರು ಹೊಸ ಸಚಿವರನ್ನು ಒಳಗೊಂಡ ಸಚಿವ ಸಂಪುಟವನ್ನು ರಚಿಸಿದ್ದಾರೆ. ಈ ಸಂಪುಟದಲ್ಲಿ ಪ್ರಿಯಾಂಕಾ ಸಹ ಒಬ್ಬರಾಗಿದ್ದಾರೆ. ಭಾರತದಲ್ಲಿ ಜನಿಸಿ, ಸಿಂಗಾಪುರ್ನಲ್ಲಿ ಶಿಕ್ಷಣ ಮುಗಿಸಿದ ಪ್ರಿಯಾಂಕಾ ಬಳಿಕ ನ್ಯೂಜಿಲೆಂಡ್ನಲ್ಲಿ ಉನ್ನತ ಶಿಕ್ಷಣ ಪಡೆದಿದ್ದಾರೆ. ಆ ಬಳಿಕ ಅವರು ಮಹಿಳಾ ದೌರ್ಜನ್ಯ, ಕೌಟುಂಬಿಕ ಹಿಂಸಾಚಾರದ ವಿರುದ್ಧ ಹೋರಾಟ ನಡೆಸುತ್ತಿದ್ದರು. ಜೊತೆಗೆ ವಲಸೆ ಕಾರ್ಮಿಕರ ಹಿತ ರಕ್ಷಣಾ ದೃಷ್ಟಿಯಿಂದಲೂ ಪೂರಕ ಕ್ರಮಗಳನ್ನು ಕೈಗೊಳ್ಳುವ ಮೂಲಕ ಸಮಾಜಮುಖಿಯಾಗಿ ಕಾರ್ಯ ನಿರ್ವಹಿಸುತ್ತಿದ್ದರು.
ಆ ಬಳಿಕ 2017 ರಲ್ಲಿ ಲೇಬರ್ ಪಾರ್ಟಿಯಿಂದ ಸಂಸತ್ ಸದಸ್ಯೆಯಾಗಿದ್ದರು. 2019 ರ ಅವಧಿಯಲ್ಲಿ ಎಥಿಕ್ಸ್ ಕಮ್ಯುನಿಟೀಸ್ ಸಚಿವರ ಸಂಸದೀಯ ಖಾಸಗಿ ಕಾರ್ಯದರ್ಶಿಯಾಗಿಯೂ ಕಾರ್ಯನಿರ್ವಹಿಸಿದ್ದಾರೆ. ಮುಂದಿನ ಶುಕ್ರವಾರ ಸಚಿವ ಸಂಪುಟದ ನೂತನ ಸದಸ್ಯರು ಪ್ರಮಾಣವಚನ ಸ್ವೀಕರಿಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.