ಢಾಕಾ: ಬಾಂಗ್ಲಾದೇಶದಲ್ಲಿ ಇಸ್ಲಾಂ ಮೂಲಭೂತವಾದಿಗಳು ಮತ್ತೆ ಅಟ್ಟಹಾಸ ಮೆರೆಯುತ್ತಿದ್ದರು. ಫ್ರೆಂಚ್ ಅಧ್ಯಕ್ಷ ಇಮ್ಯಾನುಯೆಲ್ ಮ್ಯಾಕ್ರೋನ್ ಅವರನ್ನು ಸಮರ್ಥಿಸಿಕೊಂಡಿದ್ದಾರೆ ಎಂಬ ಕಾರಣಕ್ಕೆ ಹಲವಾರು ಹಿಂದುಗಳ ಮನೆಯನ್ನು ಧ್ವಂಸ ಮಾಡಲಾಗಿದೆ.
ಫ್ರಾನ್ಸ್ ನಲ್ಲಿರುವ ಬಾಂಗ್ಲಾದೇಶ ಮೂಲದ ವ್ಯಕ್ತಿಯೊಬ್ಬರು ಮಾಕ್ರೋನ್ ಅವರನ್ನು ಸಮರ್ಥಿಸಿಕೊಂಡಿದ್ದಾರೆ ಎಂದು ಆರೋಪಿಸಿ ಬಾಂಗ್ಲಾದೇಶದಲ್ಲಿ ಅವರ ಮನೆಗೆ ಬೆಂಕಿಹಚ್ಚಿ ಧ್ವಂಸ ಮಾಡಲಾಗಿದೆ.
ಮೈಕ್ರೋನ್ ಅವರ ಕ್ರಮವನ್ನು ಸಮರ್ಥಿಸಿದ ಶಿಕ್ಷಕರೊಬ್ಬರ ಮನೆಯನ್ನು ಕೂಡ ಧ್ವಂಸ ಮಾಡಲಾಗಿದೆ.
ಕೋಮು ಭಾವನೆಯನ್ನು ಕೆರಳಿಸಿದ ಆರೋಪದಲ್ಲಿ ಕೆಲವರನ್ನು ಬಂಧನಕ್ಕೆ ಒಳಪಡಿಸಲಾಗಿದೆ ಎಂದು ಮೂಲಗಳು ತಿಳಿಸಿವೆ. ಮನೆಗಳ ಮೇಲೆ ಆಕ್ರಮಣ ಮಾಡಿದ ದುಷ್ಕರ್ಮಿಗಳನ್ನು ಕೂಡ ಪೊಲೀಸರು ಬಂಧನಕ್ಕೆ ಒಳಪಡಿಸುವ ಕಾರ್ಯವನ್ನು ಪೊಲೀಸರು ನಡೆಸುತ್ತಿದ್ದಾರೆ ಎಂದು ಹೇಳಲಾಗಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.