ಮಥುರಾ: ಅಕ್ಟೋಬರ್ 30 ರಂದು ಮಥುರಾದ ಹಿಂದೂ ದೇವಸ್ಥಾನವೊಂದರಲ್ಲಿ ನಮಾಜ್ ಮಾಡಿದ ಆರೋಪದ ಮೇಲೆ ಇಬ್ಬರು ವ್ಯಕ್ತಿಗಳ ವಿರುದ್ಧ ಉತ್ತರ ಪ್ರದೇಶ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ಫೈಜಲ್ ಖಾನ್ ಮತ್ತು ಮೊಹಮ್ಮದ್ ಚಾಂದ್ ಎಂದು ಗುರುತಿಸಲ್ಪಟ್ಟ ಇಬ್ಬರ ವಿರುದ್ಧ ಭಾರತೀಯ ದಂಡ ಸಂಹಿತೆ (ಐಪಿಸಿ) 153-ಎ, 295, ಮತ್ತು 505 ಸೆಕ್ಷನ್ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.
ಈ ಘಟನೆ ಮಥುರಾದ ನಂದ್ ಬಾಬಾ ಮಂದಿರದಲ್ಲಿ ನಡೆದಿದ್ದು, ಇಬ್ಬರು ಆರೋಪಿಗಳು ದೇವಾಲಯದ ಅಧಿಕಾರಿಗಳಿಂದ ಯಾವುದೇ ಅನುಮತಿಯಿಲ್ಲದೆ ನಮಾಝ್ ಮಾಡಿದ್ದಾರೆ ಎನ್ನಲಾಗಿದೆ. ಎಫ್ಐಆರ್ನಲ್ಲಿ ಆರೋಪಿಗಳನ್ನು ಹೊರತುಪಡಿಸಿ ಇನ್ನಿಬ್ಬರ ಹೆಸರನ್ನು ಸಹ ಸೇರಿಸಲಾಗಿದೆ. ಈ ಇಬ್ಬರು ನಮಾಝ್ ಮಾಡಿದ ಚಿತ್ರಗಳನ್ನು ಕ್ಲಿಕ್ ಮಾಡಿದ್ದಾರೆ ಮತ್ತು ಅದನ್ನು ಸಾಮಾಜಿಕ ಮಾಧ್ಯಮದಲ್ಲಿ ಪ್ರಸಾರ ಮಾಡಿದ್ದಾರೆ ಎಂಬ ಆರೋಪವಿದೆ.
ಅಯೋಧ್ಯೆ ರಾಮ ಮಂದಿರದ ಪ್ರಧಾನ ಅರ್ಚಕ ಸತ್ಯೇಂದ್ರ ದಾಸ್ ಈ ಘಟನೆಯನ್ನು ತೀವ್ರವಾಗಿ ಖಂಡಿಸಿದ್ದು, ಆರೋಪಿಗಳ ವಿರುದ್ಧ ಕಠಿಣ ಶಿಕ್ಷೆ ವಿಧಿಸುವಂತೆ ಕೋರಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.