ಬೆಂಗಳೂರು: ರಾಜ್ಯದ ಶಿರಾ ಮತ್ತು ರಾಜರಾಜೇಶ್ವರಿ ನಗರ ವಿಧಾನಸಭಾ ಕ್ಷೇತ್ರಗಳಿಗೆ ಇಂದು ಉಪ ಚುನಾವಣೆ ನಡೆಯಲಿದೆ. ಮತದಾನ ಪ್ರಕ್ರಿಯೆ ಬೆಳಗ್ಗೆಯಿಂದಲೇ ಆರಂಭಗೊಂಡಿದೆ.
ಸದ್ಯ ರಾಜ್ಯದ ಆಡಳಿತ ಚುಕ್ಕಾಣಿ ಹಿಡಿದಿರುವ ಬಿಜೆಪಿ, ವಿಪಕ್ಷ ಕಾಂಗ್ರೆಸ್, ಜೆಡಿಸ್ ನ ಅಭ್ಯರ್ಥಿಗಳು ಸೇರಿದಂತೆ ಎರಡೂ ಕ್ಷೇತ್ರದಲ್ಲಿ 31 ಅಭ್ಯರ್ಥಿಗಳು ಸ್ಪರ್ಧೆಯಲ್ಲಿದ್ದಾರೆ. ಸುಮಾರು 6.8 ಲಕ್ಷ ಮಂದಿ ಈ ಮತದಾರರು ಮತದಾನ ಮಾಡುವ ಸಾಧ್ಯತೆ ಇದೆ. ಈ ಮಿನಿ ಸಮರ ಮೂರೂ ರಾಜಕೀಯ ಪಕ್ಷಗಳಿಗೆ ಪ್ರತಿಷ್ಠೆಯ ವಿಚಾರವಾಗಿದ್ದು, ಮತದಾರರ ಆಯ್ಕೆ ಯಾರಾಗಲಿದ್ದಾರೆ ಎಂಬುದನ್ನು ಕಾದು ನೋಡಬೇಕಿದೆ.
ಇಂದು ಬೆಳಗ್ಗೆ 7 ಗಂಟೆಯಿಂದ ಸಂಜೆ 6 ಗಂಟೆಯವರೆಗೆ ಮತದಾನಕ್ಕೆ ಅವಕಾಶ ನೀಡಲಾಗಿದೆ. ಎರಡೂ ಕ್ಷೇತ್ರಗಳಿಗೆ ಸಂಬಂಧಿಸಿದಂತೆ 1008 ಮತಗಟ್ಟೆಗಳಲ್ಲಿ ಮತದಾನ ನಡೆಯಲಿದೆ. ಕೊರೋನಾ ಹಿನ್ನೆಲೆಯಲ್ಲಿ ಸಾಕಷ್ಟು ಮುಂಜಾಗ್ರತೆ ವಹಿಸಿಕೊಂಡು ಚುನಾವಣೆಯನ್ನು ನಡೆಸಲಾಗುತ್ತಿದೆ.
5 ಗಂಟೆ ಬಳಿಕ ಕೊರೋನಾ ಸೋಂಕಿತರ ಮತದಾನಕ್ಕೆ ಅವಕಾಶವನ್ನು ನೀಡಲಾಗಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.