ನವದೆಹಲಿ: ಲಲಿತ್ ಮೋದಿ ವೀಸಾ ಪ್ರಕರಣಕ್ಕೆ ಸಂಬಂಧಿಸಿದಂತೆ ತನ್ನ ರಾಜೀನಾಮೆಗೆ ಒತ್ತಾಯಿಸುತ್ತಿರುವ ಪ್ರತಿಪಕ್ಷಗಳ ವಿರುದ್ಧ ಸುಷ್ಮಾ ಸ್ವರಾಜ್ ಕಿಡಿಕಾರಿದ್ದಾರೆ.
ಸೋಮವಾರ ರಾಜ್ಯಸಭೆಯಲ್ಲಿ ಹೇಳಿಕೆ ನೀಡಿರುವ ಅವರು, ‘ಲಲಿತ್ ಮೋದಿಗೆ ವೀಸಾ ನೀಡುವಂತೆ ಬ್ರಿಟನ್ ಸರ್ಕಾರಕ್ಕೆ ನಾನು ಮನವಿ ಮಾಡಿಲ್ಲ. ನನ್ನ ಮೇಲಿನ ಆರೋಪಗಳೆಲ್ಲ ನಿರಾಧಾರ’ ಎಂದಿದ್ದಾರೆ.
ಅಲ್ಲದೇ ವೀಸಾ ಸಂಬಂಧ ನಾನು ಬ್ರಿಟನ್ನಿನ ಯಾವುದೇ ವಲಸೆ ಅಧಿಕಾರಿಗಳೊಂದಿಗೂ ಮಾತನಾಡಿಲ್ಲ ಎಂದು ಅವರು ಸ್ಪಷ್ಟಪಡಿಸಿದ್ದಾರೆ.
ಹೇಳಿಕೆ ನೀಡುತ್ತಿರುವ ವೇಳೆ ಪ್ರತಿಪಕ್ಷಗಳ ಗದ್ದಲ ತೀವ್ರಗೊಂಡ ಹಿನ್ನಲೆಯಲ್ಲಿ ಸುಷ್ಮಾ ತಮ್ಮ ಮಾತನ್ನು ಅರ್ಧಕ್ಕೆ ನಿಲ್ಲಿಸಬೇಕಾಯಿತು.
ಗದ್ದಲದಿಂದ ರಾಜ್ಯಸಭಾ ಉಪಸಭಾಪತಿ ಪಿ.ಜೆ.ಕುರಿಯನ್ ಅವರು ಕಲಾಪವನ್ನು ಮುಂದಕ್ಕೆ ದೂಡಿದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.