ಮಂಗಳೂರು: ಅಂತರರಾಷ್ಟ್ರೀಯ ವಿಮಾನ ನಿಲ್ದಾಣವೆಂದು ಗುರುತಿಸಿಕೊಂಡಿರುವ ಬಜಪೆಯ ಈ ರಸ್ತೆಯಲ್ಲಿ ಪ್ರಯಾಣಿಸುವುದು ಅತ್ಯಂತ ಪ್ರಯಾಸ ಹಾಗೂ ಸಾಹಸದ ಕೆಲಸ. ಈ ರಸ್ತೆ ಪೂರ್ತಿ ಬೃಹದಾಕಾರದ ಗುಂಡಿಗಳಿಂದಲ್ಲೇ ಆವೃತ್ತವಾಗಿದೆ. ಇದರಿಂದ ಬೇಸತ್ತ ಸ್ಥಳೀಯರು ನಾಗರಿಕ ಹೋರಾಟ ಸಮಿತಿಯನ್ನು ಹುಟ್ಟುಹಾಕಿಕೊಂಡಿದ್ದಾರೆ. ಪ್ರತಿಭಟನಾಕಾರರು ಹಳೆ ಏರ್ಪೋರ್ಟ್ನ ಮುರನಗರದಲ್ಲಿ ರಸ್ತೆ ತಡೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದರು.
ಈ ರಸ್ತೆಯಲ್ಲಿ ಪ್ರಯಾಣಿಸುವವರ ಗೋಳು ಹೇಳತೀರದು. ನಿತ್ಯವೂ ಇಲ್ಲಿ ಅದೆಷ್ಟೋ ದ್ವಿಚಕ್ರ ವಾಹನ ಸವಾರರು ಬಿದ್ದು ಗಾಯಗೊಂಡಿದ್ದಕ್ಕೆ ಲೆಕ್ಕವೇ ಇಲ್ಲದಂತಾಗಿದೆ. ಇದರಿಂದ ಬೇಸತ್ತು ನಾಗರಿಕ ಹೋರಾಟ ಸಮಿತಿಯನ್ನು ಹುಟ್ಟುಹಾಕಿಕೊಂಡಿದ್ದಾರೆ. ಹಳೆ ಏರ್ಫೋರ್ಟ್ನ ಮುರನಗರದಲ್ಲಿ ರಸ್ತೆತಡೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದರು. ಅಲ್ಲದೇ ವಿವಿಧ ಸಂಘಟನೆಗಳು ಕೂಡ ಪ್ರತಿಭಟನೆಗೆ ಬೆಂಬಲ ಸೂಚಿಸಿದ್ದಾರೆ. ಹಲವಾರು ದಿನಗಳಿಂದ ಇಲ್ಲಿನ ಗ್ರಾಮ ಪಂಚಾಯತ್ ಸದಸ್ಯರಿಗೆ ಮನವಿ ನೀಡಿದ್ದರೂ ಸ್ಪಂದಿಸುತ್ತಿಲ್ಲ. ರಸ್ತೆ ಕಾಮಗಾರಿಯನ್ನು ಕೈಗೆತ್ತಿಕೊಳ್ಳುವ ಭರವಸೆ ನೀಡಿದರೂ ಇಲ್ಲಿಯ ತನಕ ಆರಂಭಗೊಂಡಿಲ್ಲ ಎಂದು ದಲಿತ ಮುಖಂಡ ದೇವದಾಸ್ ಹೇಳುತ್ತಾರೆ.
ವಾಹನ ಚಲಾಯಿಸುವುದು ಅತ್ಯಂತ ಕಷ್ಟ ಹಾಗೂ ಅಪಾಯಕಾರಿಯಾದರೂ ಸರ್ಕಾರ ಹಾಗೂ ಜನಪ್ರತಿನಿಧಿಗಳಿಗೆ ಈ ಸಮಸ್ಯೆ ಅರಿವೇ ಇಲ್ಲದಂತಿದೆ. ಸಂಬಂಧಪಟ್ಟ ಅಧಿಕಾರಿ ಸ್ಪಂದಿಸುವ ಕೆಲಸ ಮಾಡಬೇಕು. ಜಿಲ್ಲಾಧಿಕಾರಿಯವರ ನಿರ್ಲಕ್ಷ್ಯತನದಿಂದ ಕೆಟ್ಟು ಹೋದ ರಸ್ತೆಯಿಂದಾಗಿ ಜನ ಹಾಗೂ ವಾಹನ ಸಂಚಾರಕ್ಕೆ ಅಡ್ಡಿ ಉಂಟಾಗಿದೆ. ತಕ್ಷಣವೇ ರಸ್ತೆ ಕಾಮಗಾರಿಯನ್ನು ಕೈಗೊಳ್ಳಬೇಕು. ಇಲ್ಲದಿದ್ದರೆ ಜಿಲ್ಲಾಧಿಕಾರಿ ಕಚೇರಿ ಮುಂಭಾಗದಲ್ಲಿ ಪ್ರತಿಭಟನೆ ಮಾಡಲಾಗುವುದು ಎಂದು ಡಿವೈಎಫ್ಐ ಮುಖಂಡ ಇಮ್ತಿಯಾಜ್ ಎಚ್ಚರಿಕೆ ನೀಡಿದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.