ನವದೆಹಲಿ: ರಿಪಬ್ಲಿಕ್ ಟಿವಿ ಮುಖ್ಯಸ್ಥ ಅರ್ನಬ್ ಗೋಸ್ವಾಮಿ ಅವರ ಬಂಧನಕ್ಕೆ ವಿವಿಧ ವಲಯಗಳಿಂದ ಭಾರಿ ಆಕ್ರೋಶಗಳು ವ್ಯಕ್ತವಾಗಿದೆ. ಕೇಂದ್ರ ಗೃಹಸಚಿವ ಅಮಿತ್ ಶಾ, ಕೇಂದ್ರ ಮಾಹಿತಿ ಮತ್ತು ಪ್ರಸಾರ ಖಾತೆ ಸಚಿವ ಪ್ರಕಾಶ್ ಜಾವಡೇಕರ್ ಸೇರಿದಂತೆ ಅನೇಕರು ಈ ಕೃತ್ಯವನ್ನು ಖಂಡಿಸಿದ್ದಾರೆ.
ಟ್ವೀಟ್ ಮಾಡಿರುವ ಅಮಿತ್ ಶಾ, “ಕಾಂಗ್ರೆಸ್ ಮತ್ತು ಅದರ ಮೈತ್ರಿಗಳು ಮತ್ತೊಮ್ಮೆ ಪ್ರಜಾಪ್ರಭುತ್ವವನ್ನು ನಾಚಿಕೆಪಡುವಂತೆ ಮಾಡಿವೆ. ರಿಪಬ್ಲಿಕ್ ಟಿವಿ ಮತ್ತು ಗೋಸ್ವಾಮಿ ವಿರುದ್ಧ ಅಧಿಕಾರವನ್ನು ಬಳಸಿ ವೈಯಕ್ತಿಕ ಸ್ವಾತಂತ್ರ್ಯ ಮತ್ತು ಪ್ರಜಾಪ್ರಭುತ್ವದ ನಾಲ್ಕನೇ ಅಂಗದ ಮೇಲೆ ದಾಳಿ ಮಾಡಲಾಗುತ್ತಿದೆ. ಇದು ತುರ್ತುಪರಿಸ್ಥಿತಿಯನ್ನು ನಮಗೆ ನೆನಪಿಸಿಕೊಡುತ್ತಿದೆ. ಮುಕ್ತ ಪತ್ರಿಕೆಯ ಮೇಲಿನ ದಾಳಿಯನ್ನು ನಾವು ಖಂಡಿಸಬೇಕು ಮತ್ತು ವಿರೋಧಿಸಬೇಕು” ಎಂದಿದ್ದಾರೆ.
ಪ್ರಕಾಶ್ ಜಾವಡೇಕರ್ ಅವರು ಟ್ವೀಟ್ ಮಾಡಿ, “ಮಹಾರಾಷ್ಟ್ರದಲ್ಲಿ ಪತ್ರಿಕಾ ಸ್ವಾತಂತ್ರ್ಯ ಮೇಲಿನ ದಾಳಿಯನ್ನು ನಾವು ಖಂಡಿಸುತ್ತೇವೆ. ಪತ್ರಿಕೋದ್ಯಮವನ್ನು ಎದುರಿಸುವ ರೀತಿ ಇದಲ್ಲ. ಇದು ನಮಗೆ ತುರ್ತುಪರಿಸ್ಥಿತಿಯ ಸಂದರ್ಭದಲ್ಲಿ ಪತ್ರಿಕೆಯ ಮೇಲೆ ನಡೆಯುತ್ತಿದ್ದ ದಾಳಿಯನ್ನು ನೆನಪಿಸಿಕೊಡುತ್ತದೆ” ಎಂದಿದ್ದಾರೆ.
Congress and its allies have shamed democracy once again.
Blatant misuse of state power against Republic TV & Arnab Goswami is an attack on individual freedom and the 4th pillar of democracy.
It reminds us of the Emergency. This attack on free press must be and WILL BE OPPOSED.
— Amit Shah (@AmitShah) November 4, 2020
We condemn the attack on press freedom in #Maharashtra. This is not the way to treat the Press. This reminds us of the emergency days when the press was treated like this.@PIB_India @DDNewslive @republic
— Prakash Javadekar (@PrakashJavdekar) November 4, 2020
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.