ಲಕ್ನೋ: ಉತ್ತರ ಪ್ರದೇಶದಲ್ಲಿ ದೇಶ-ವಿದೇಶಗಳ ಹೂಡಿಕೆಗಳನ್ನು ಆಕರ್ಷಿಸಲು, ಉತ್ತೇಜಿಸಲು ಜೊತೆಗೆ ಉದ್ಯೋಗಾವಕಾಶವನ್ನು ಸೃಷ್ಟಿಸುವುದಕ್ಕೆ ಸಂಬಂಧಿಸಿದಂತೆ ಬೃಹತ್ ಸಂಸ್ಥೆಗಳ ಹೂಡಿಕೆ ಪ್ರಕ್ರಿಯೆ ಸರಾಗಗೊಳಿಸಲು ಯೋಗಿ ಸರ್ಕಾರ ಪೂರಕ ಕ್ರಮಗಳನ್ನು ಕೈಗೊಂಡಿದೆ.
ಇದರಿಂದಾಗಿ ರಾಜ್ಯದಲ್ಲಿ ಮೂಲ ಸೌಕರ್ಯ, ಕೈಗಾರಿಕಾ ಕ್ಷೇತ್ರಗಳ ಹೂಡಿಕೆ ಹೆಚ್ಚಾಗಲಿದ್ದು ಸುಮಾರು 1.35 ಲಕ್ಷಗಳಿಗೂ ಹೆಚ್ಚು ಉದ್ಯೋಗ ಸೃಷ್ಟಿಯಾಗಲಿದೆ ಎಂದು ಯೋಗಿ ಸರ್ಕಾರ ಭರವಸೆ ವ್ಯಕ್ತಪಡಿಸಿದೆ. ವಿದೇಶಿ ಹೂಡಿಕೆಗೆ ಸಂಬಂಧಿಸಿದಂತೆ ಜಪಾನ್, ಅಮೆರಿಕ, ಬ್ರಿಟನ್, ದ. ಕೊರಿಯಾ, ಜರ್ಮನಿ, ಕೆನಡಾ ಸೇರಿದಂತೆ ಇನ್ನೂ ಅನೇಕ ದೇಶಗಳು ಆಸಕ್ತಿ ತೋರಿವೆ. ಈ ದೇಶಗಳಿಂದ ಉತ್ತರ ಪ್ರದೇಶದಲ್ಲಿ 45 ಸಾವಿರ ಕೋಟಿಗಿಂತಲೂ ಹೆಚ್ಚಿನ ಹಣ ಹೂಡಿಕೆಯಾಗುವ ಸಾಧ್ಯತೆ ಇದೆ ಎಂದು ಸರ್ಕಾರ ಅಭಿಪ್ರಾಯ ವ್ಯಕ್ತಪಡಿಸಿದೆ.
ಈ ವಿಚಾರಕ್ಕೆ ಸಂಬಂಧಿಸಿದಂತೆ ಮಾಹಿತಿ ನೀಡಿರುವ ಮೂಲಸೌಕರ್ಯ ಮತ್ತು ಕೈಗಾರಿಕಾ ಅಭಿವೃದ್ಧಿ ಆಯುಕ್ತ ಅಲೋಕ್ ಟಂಡನ್, ಮೇಲಿನ ಎಲ್ಲಾ ಅಂಶಗಳಿಗೆ ಸಂಬಂಧಿಸಿದಂತೆ ರಾಜ್ಯದಲ್ಲಿ 1,35,362ರಷ್ಟು ಉದ್ಯೋಗ ಸೃಷ್ಟಿ ಸಾಧ್ಯವಾಗಲಿದೆ. ಇದಕ್ಕೆ ಪೂರಕ ಎಂಬಂತೆ ಯುಪಿ ಸರ್ಕಾರ 426 ಎಕರೆ ಭೂಮಿಯನ್ನು ಮಂಜೂರು ಮಾಡಿದೆ. 326 ಫ್ಲ್ಯಾಟ್ಗಳನ್ನು ಆರು ತಿಂಗಳಿನಲ್ಲಿಯೇ 6,700 ಕೋಟಿ ರೂ ಹೂಡಿಕೆಗೆ ಸಂಬಂಧಿಸಿದಂತೆ ನೀಡಿದೆ ಎಂದು ಮಾಹಿತಿ ನೀಡಿದ್ದಾರೆ.
ಸರ್ಕಾರದ ನಿವೇಶನ ಮಿತ್ರ ಪೋರ್ಟಲ್ನಿಂದ ಉದ್ಯಮಿಗಳಿಗೆ 166 ಸೇವೆಗಳನ್ನು ಒದಗಿಸಲಾಗುತ್ತಿದೆ. ಉತ್ತರ ಪ್ರದೇಶದ ಯೋಗಿ ಸರ್ಕಾರದ ಈ ಎಲ್ಲಾ ಕ್ರಮಗಳು ದೇಶ, ವಿದೇಶಗಳ ಹೂಡಿಕೆಗಳನ್ನು ರಾಜ್ಯದತ್ತ ಆಕರ್ಷಿಸಲು ನೆರವಾಗುತ್ತಿವೆ ಎಂದು ಟಂಡನ್ ತಿಳಿಸಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.