ಬೆಂಗಳೂರು: ಲವ್ ಜಿಹಾದ್ ತಡೆಗೆ ಸಂಬಂಧಿಸಿದಂತೆ ರಾಜ್ಯದಲ್ಲಿಯೂ ಶೀಘ್ರದಲ್ಲೇ ಕಾನೂನು ರೂಪಿಸಲು ಚಿಂತನೆ ನಡೆಸಲಾಗಿದೆ. ಈ ವಿಚಾರದಲ್ಲಿ ದೇಶದ ಬೇರೆ ಬೇರೆ ರಾಜ್ಯಗಳು ಯಾವ ರೀತಿಯ ಕ್ರಮ ತೆಗೆದುಕೊಳ್ಳಲು ಮುಂದಾಗಿವೆ ಎಂಬುದನ್ನು ಆಧರಿಸಿ ರಾಜ್ಯದಲ್ಲಿಯೂ ಈ ಬಗ್ಗೆ ತೀರ್ಮಾನ ತೆಗೆದುಕೊಳ್ಳುವುದು ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.
ಕೆಲ ಸಮಯಗಳಿಂದ ಮತಾಂತರ ಮಾಡುವ ನಿಟ್ಟಿನಲ್ಲಿ ಕೆಲವು ಶಕ್ತಿಗಳು ಹೆಚ್ಚು ಕಾರ್ಯ ಪ್ರವೃತ್ತರಾಗಿರುವುದು ಕಂಡು ಬರುತ್ತಿದೆ. ಮದುವೆಗಾಗಿ ಮತಾಂತರ ಸರಿಯಲ್ಲ ಎಂಬುದನ್ನು ಕೆಲ ದಿನಗಳ ಹಿಂದೆ ಅಲಹಾಬಾದ್ ಹೈಕೋರ್ಟ್ ಸಹ ಎತ್ತಿ ಹಿಡಿದಿದೆ. ಜೊತೆಗೆ ಲವ್ ಜಿಹಾದ್, ಮತಾಂತರಕ್ಕೆ ಸಂಬಂಧಿಸಿದಂತೆ ಈಗಾಗಲೇ ದೇಶದ ಅನೇಕ ರಾಜ್ಯಗಳು ಸೂಕ್ತ ಕಾನೂನು ಕ್ರಮ ಕೈಗೊಳ್ಳಲು ಚಿಂತನೆ ನಡೆಸುತ್ತಿವೆ. ದೇಶದೆಲ್ಲೆಡೆ ಇಂತಹ ಒಂದು ಕೂಗು ಕೇಳಿ ಬರುತ್ತಿದೆ. ಈ ಎಲ್ಲ ವಿಚಾರಗಳನ್ನು ಗಮನದಲ್ಲಿಟ್ಟುಕೊಂಡು ಕಾನೂನಿನ ಚೌಕಟ್ಟಿನಲ್ಲಿ ಕ್ರಮ ರೂಪಿಸಲು ರಾಜ್ಯ ಸರ್ಕಾರ ಚಿಂತನೆ ನಡೆಸುತ್ತಿದೆ ಎಂದು ಅವರು ಹೇಳಿದ್ದಾರೆ.
ಈಗಾಗಲೇ ಹಲವು ರಾಜ್ಯಗಳು ಮತಾಂತರ ನಿಷೇಧಕ್ಕೆ ಸಂಬಂಧಿಸಿದಂತೆ ತೆಗೆದುಕೊಂಡಿರುವ ಕ್ರಮಗಳನ್ನು ನೋಡಿಕೊಂಡು, ಕಾನೂನು ತಜ್ಞರ ಸಲಹೆ, ಅಭಿಪ್ರಾಯಗಳನ್ನು ಪಡೆದುಕೊಂಡು ಸೂಕ್ತ ಕಾನೂನು ರಚಿಸಲು ಸರ್ಕಾರ ಯೋಚಿಸುತ್ತಿದೆ ಎಂದು ಬೊಮ್ಮಾಯಿ ಮಾಹಿತಿ ನೀಡಿದ್ದಾರೆ. ಕಳೆದ ಕೆಲ ವರ್ಷಗಳಿಂದಲೂ ಮತಾಂತರ ನಿಷೇಧಕ್ಕೆ ಕಾನೂನು ಕ್ರಮ ರಚಿಸಲು ಸಾರ್ವಜನಿಕ ವಲಯದಿಂದ ಬೇಡಿಕೆ ಇದ್ದು ಮುಂದಿನ ದಿನಗಳಲ್ಲಿ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.