ಮುಂಬಯಿ: ರಿಪಬ್ಲಿಕ್ ಟಿವಿ ಮುಖ್ಯಸ್ಥ ಅರ್ನಬ್ ಗೋಸ್ವಾಮಿ ಅವರ ಬಂಧನವನ್ನು ಖಂಡಿಸಿ ಮುಂಬಯಿಯಲ್ಲಿ ಇಂದು ಬಿಜೆಪಿ ಯುವ ಮೋರ್ಚಾ ಪ್ರತಿಭಟನೆಯನ್ನು ನಡೆಸಲು ನಿರ್ಧರಿಸಿದೆ. ಈ ಬಗ್ಗೆ ಯುವ ಮೋರ್ಚಾ ಅಧ್ಯಕ್ಷ ತೇಜಸ್ವಿ ಸೂರ್ಯ ಅವರು ಘೋಷಣೆ ಮಾಡಿದ್ದಾರೆ.
ಅರ್ನಬ್ ಅವರ ಬಂಧನವನ್ನು ಖಂಡಿಸಿರುವ ತೇಜಸ್ವಿ ಸೂರ್ಯ, ಈ ಕೃತ್ಯ ಪತ್ರಿಕಾ ಸ್ವಾತಂತ್ರ್ಯದ ಮೇಲಿನ ದಾಳಿ ಎಂದಿದ್ದಾರೆ.
ಸಾಂವಿಧಾನಿಕ ಸ್ವಾತಂತ್ರ್ಯಗಳನ್ನು ಗೌರವಿಸುವ ಮುಂಬೈಗರು ಬುಧವಾರ “ಫ್ಯಾಸಿಸ್ಟ್ ಕ್ರಮ” ದ ವಿರುದ್ಧ ಬಿಜೆವೈಎಂ ನಡೆಸುವ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವಂತೆ ಮನವಿ ಮಾಡಿದ್ದಾರೆ.
2018ರ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹಾರಾಷ್ಟ್ರ ಪೊಲೀಸರು ಬುಧವಾರ ಬೆಳಿಗ್ಗೆ ಗೋಸ್ವಾಮಿಯನ್ನು ಅವರ ನಿವಾಸದಿಂದ ಬಂಧಿಸಿದ್ದಾರೆ. ಮುಂಬಯಿ ಪೊಲೀಸರ ಈ ಕೃತ್ಯಕ್ಕೆ ಎಲ್ಲಾ ಕಡೆಯಿಂದಲೂ ವಿರೋಧ ವ್ಯಕ್ತವಾಗುತ್ತಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.