ಹುಬ್ಬಳ್ಳಿ: ಕೇಂದ್ರ ಸಚಿವ ಪೀಯೂಷ್ ಗೋಯಲ್ ಅವರು ರಾಜ್ಯದ ಹುಬ್ಬಳ್ಳಿಯ ರೈಲು ನಿಲ್ದಾಣದ ಬಗ್ಗೆ ಮೆಚ್ಚುಗೆ ಸೂಚಿಸಿ ಟ್ವೀಟ್ ಮಾಡಿದ್ದಾರೆ.
ಆಧುನಿಕ ವ್ಯವಸ್ಥೆಗಳನ್ನು ಒಳಗೊಂಡು ಸ್ವಚ್ಛತೆಗೆ ಹೆಚ್ಚು ಪ್ರಾಶಸ್ತ್ಯ ನೀಡಿ ಈ ರೈಲು ನಿಲ್ದಾಣವನ್ನು ನಿರ್ವಹಣೆ ಮಾಡಲಾಗಿದ್ದು, ಈ ಸಂಬಂಧ ಗೋಯಲ್ ಪ್ರಶಂಸೆ ವ್ಯಕ್ತಪಡಿಸಿದ್ದಾರೆ.
ಈ ರೈಲು ನಿಲ್ದಾಣವನ್ನು ಆಧುನಿಕ ವ್ಯವಸ್ಥೆಗಳ ಜೊತೆಗೆ ನವೀಕರಣ ಮಾಡಲಾಗಿದ್ದು, ವಿದ್ಯುದೀಪಗಳಿಂದ ಕಂಗೊಳಿಸುತ್ತಿದೆ. ಆ ಮೂಲಕ ಪ್ರಯಾಣಿಕರಿಗೆ ಹುಬ್ಬಳ್ಳಿ ರೈಲು ನಿಲ್ದಾಣ ವಿಶೇಷವಾದ ಅಹ್ಲಾದ, ಆನಂದವನ್ನು ನೀಡುತ್ತಿದೆ. ಪ್ರಯಾಣಿಕ ಸ್ನೇಹಿ ಸೌಲಭ್ಯಗಳು, ಮೂಲ ಸೌಕರ್ಯಗಳ ಹೆಚ್ಚಳ ಈ ರೈಲು ನಿಲ್ದಾಣಕ್ಕೆ ಹೊಸ ರೂಪವನ್ನು ನೀಡಿದೆ. ಸ್ವಚ್ಛತೆಗೂ ಆದ್ಯತೆ ಇದೆ. ಈ ಎಲ್ಲ ಕಾರಣಗಳಿಂದ ಈ ನಿಲ್ದಾಣ ವಿಭಿನ್ನವಾಗಿ ಕಾಣುವಂತಾಗಿದೆ ಎಂದು ಗೋಯಲ್ ಟ್ವೀಟ್ ಮಾಡಿದ್ದಾರೆ.
ಎಲ್ಲಾ ಸೌಲಭ್ಯ, ಮೂಲ ಸೌಕರ್ಯಗಳ ಜೊತೆಗೆ ದೇಶದ ಗಮನ ಸೆಳೆದಿರುವ ಹುಬ್ಬಳ್ಳಿ ರೈಲು ನಿಲ್ದಾಣ ಕರ್ನಾಟಕದ ಹೆಮ್ಮೆ ಎಂದೇ ಹೇಳಬಹುದು.
Hubballi Junction Railway Station of Karnataka is providing a delightful experience to passengers with its cleanliness, vibrant lighting, beautification & modern facilities.
The enhanced infrastructure & new passenger-friendly amenities have made this station a class apart. pic.twitter.com/Hd0jWa533d
— Piyush Goyal (@PiyushGoyal) November 4, 2020
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.