ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಗುರುವಾರ ವರ್ಚುವಲ್ ಗ್ಲೋಬಲ್ ಇನ್ವೆಸ್ಟರ್ ರೌಂಡ್ಟೇಬಲ್ (ವಿಜಿಐಆರ್) ಅಧ್ಯಕ್ಷತೆ ವಹಿಸಲಿದ್ದಾರೆ.
ವಿಜಿಐಆರ್ ಅನ್ನು ಕೇಂದ್ರ ಹಣಕಾಸು ಸಚಿವಾಲಯ ಮತ್ತು ರಾಷ್ಟ್ರೀಯ ಹೂಡಿಕೆ ಮತ್ತು ಮೂಲಸೌಕರ್ಯ ನಿಧಿ ಆಯೋಜನೆಗೊಳಿಸುತ್ತಿದೆ. ಇದು ಪ್ರಮುಖ ಜಾಗತಿಕ ಸಾಂಸ್ಥಿಕ ಹೂಡಿಕೆದಾರರು, ಭಾರತೀಯ ವ್ಯಾಪಾರ ಮುಖಂಡರು ಮತ್ತು ಭಾರತ ಸರ್ಕಾರದಿಂದ ಉನ್ನತ ಅಧಿಕಾರಿಗಳು ಮತ್ತು ಹಣಕಾಸು ಮಾರುಕಟ್ಟೆ ನಿಯಂತ್ರಕರ ನಡುವಿನ ಸಂವಾದವಾಗಿದೆ ಎಂದು ಪ್ರಧಾನಿ ಕಾರ್ಯಾಲಯ ಮಂಗಳವಾರ ಪ್ರಕಟಣೆಯಲ್ಲಿ ತಿಳಿಸಿದೆ.
ಈ ಸಂದರ್ಭದಲ್ಲಿ ಕೇಂದ್ರ ಹಣಕಾಸು ಸಚಿವ ನಿರ್ಮಲಾ ಸೀತಾರಾಮನ್, ಕೇಂದ್ರ ಹಣಕಾಸು ಖಾತೆ ರಾಜ್ಯ ಸಚಿವ ಅನುರಾಗ್ ಠಾಕೂರ್, ಆರ್ಬಿಐ ಗವರ್ನರ್ ಶಕ್ತಿಕಾಂತ ದಾಸ್ ಮತ್ತು ಇತರ ಗಣ್ಯರು ಉಪಸ್ಥಿತರಿರಲಿದ್ದಾರೆ.
ಈ ಕಾರ್ಯಕ್ರಮವು ಪ್ರಮುಖ ಜಾಗತಿಕ ಹೂಡಿಕೆದಾರರು ಮತ್ತು ಭಾರತೀಯ ವ್ಯಾಪಾರ ಮುಖಂಡರಿಗೆ ಹಿರಿಯ ನೀತಿ ನಿರೂಪಕರೊಂದಿಗೆ ತೊಡಗಿಸಿಕೊಳ್ಳಲು ಮತ್ತು ಭಾರತದಲ್ಲಿ ಅಂತರರಾಷ್ಟ್ರೀಯ ಹೂಡಿಕೆಗಳ ಬೆಳವಣಿಗೆಯನ್ನು ವೇಗಗೊಳಿಸುವ ಸಂಬಂಧ ಚರ್ಚಿಸಲು ಅವಕಾಶವನ್ನು ಒದಗಿಸುತ್ತದೆ.
ಇದು ವಿದೇಶಿ ಹೂಡಿಕೆಗಳನ್ನು ಆಕರ್ಷಿಸಲು ಮತ್ತು ಆರ್ಥಿಕತೆಯನ್ನು ಹೆಚ್ಚಿಸಲು ಸರಕಾರದ ಉತ್ತೇಜನದ ಭಾಗವಾಗಿ ನಡೆಯುತ್ತಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.