ನವದೆಹಲಿ: ಮಹತ್ವದ ಬೆಳವಣಿಗೆಯೊಂದರಲ್ಲಿ, ಭಾರತದ ಸಾರ್ವಜನಿಕ ಪ್ರಸಾರಕ ಪ್ರಸಾರ್ ಭಾರತಿಯು ಭಾಸ್ಕರಾಚಾರ್ಯ ನ್ಯಾಷನಲ್ ಇನ್ಸ್ಟಿಟ್ಯೂಟ್ ಫಾರ್ ಸ್ಪೇಸ್ ಅಪ್ಲಿಕೇಷನ್ಸ್ ಮತ್ತು ಜಿಯೋ-ಇನ್ಫಾರ್ಮ್ಯಾಟಿಕ್ಸ್ ಹಾಗೂ ಎಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ ತಂತ್ರಜ್ಞಾನ ಸಚಿವಾಲಯದೊಂದಿಗೆ ಮಹತ್ವದ ಒಪ್ಪಂದಕ್ಕೆ ಸಹಿ ಹಾಕಿದೆ.
ಎಂಒಯು (Memorandum of Understanding) ಅಡಿಯಲ್ಲಿ, 51 ಡಿಟಿಎಚ್ ಶಿಕ್ಷಣ ಟಿವಿ ಚಾನೆಲ್ಗಳು ಎಲ್ಲಾ ಡಿಡಿ ಫ್ರೀ-ಡಿಶ್ ವೀಕ್ಷಕರಿಗೆ ಡಿಡಿ ಕೋ-ಬ್ರಾಂಡೆಡ್ ಚಾನೆಲ್ಗಳಾಗಿ ಲಭ್ಯವಿರುತ್ತವೆ.
ಈ ಕ್ರಮವು ಗ್ರಾಮೀಣ ಮತ್ತು ದೂರದ ಪ್ರದೇಶಗಳನ್ನು ಒಳಗೊಂಡಂತೆ ಪ್ರತಿ ಮನೆಯಲ್ಲೂ ಗುಣಮಟ್ಟದ ಶೈಕ್ಷಣಿಕ ಕಾರ್ಯಕ್ರಮಗಳನ್ನು ತರಲು ಉದ್ದೇಶಿಸಿದೆ. ಕೌಶಲ್ಯ ಅಭಿವೃದ್ಧಿ ಮತ್ತು ದೇಶದ ಕಟ್ಟಕಡೆಯ ವ್ಯಕ್ತಿಗೆ ಗುಣಮಟ್ಟದ ಶಿಕ್ಷಣವನ್ನು ನೀಡುವಲ್ಲಿ ಸರ್ಕಾರದ ಬದ್ಧತೆಗೆ ಅನುಗುಣವಾಗಿ 24×7 ಎಲ್ಲಾ ವೀಕ್ಷಕರಿಗೆ ಈ ಸೇವೆಗಳು ಉಚಿತವಾಗಿ ಲಭ್ಯವಿರುತ್ತವೆ. ಎಲ್ಲರಿಗೂ ಶಿಕ್ಷಣವನ್ನು ನೀಡುವ ಸರ್ಕಾರದ ಗುರಿಯನ್ನು ಸಾಧಿಸುವಲ್ಲಿ ಈ ಉಪಕ್ರಮವು ಮಹತ್ವದ್ದಾಗಿರುತ್ತದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.