ಮಂಗಳೂರು: ಶ್ರವಣ ದೋಷದ ಸಮಸ್ಯೆಯಿಂದ ಮಾತನಾಡುವುದಕ್ಕೂ ಕಷ್ಟಪಡುತ್ತಿದ್ದ ಮಗುವಿನ ಕುಟುಂಬಕ್ಕೆ 5 ಲಕ್ಷ ರೂ. ಗಳ ಪರಿಹಾರ ಧನವನ್ನು ಮುಖ್ಯಮಂತ್ರಿ ಯಡಿಯೂರಪ್ಪ ಒದಗಿಸಿದ್ದಾರೆ.
ಬೆಳ್ತಂಗಡಿ ತಾಲೂಕಿನ ತಣ್ಣೀರುಪಂಥ ಗ್ರಾಮದ ದೇಸಿನ್ ಕೊಡಿಯ ನಿವಾಸಿ ರವಿ ಪೂಜಾರಿ ಅವರ ಮಗಳು, 3 ವರ್ಷ 7 ತಿಂಗಳುಗಳ ಮಗು ಆರಾಧ್ಯಳಿಗೆ ಶ್ರವಣದೋಷ ಸಮಸ್ಯೆ ಇದೆ. ಈ ಕಾರಣದಿಂದ ಆಕೆ ಮಾತನಾಡುವುದಕ್ಕೂ ಸಮಸ್ಯೆ ಅನುಭವಿಸುವಂತಾಗಿದೆ. ಈ ಹಿನ್ನೆಲೆಯಲ್ಲಿ ಬಿಜೆಪಿ ಕಾರ್ಯಕಾರಿಣಿ ಸಭೆಯಲ್ಲಿ ಭಾಗವಹಿಸಲು ಮಂಗಳೂರಿಗೆ ಆಗಮಿಸಿದ ಯಡಿಯೂರಪ್ಪ ಅವರನ್ನು ಭೇಟಿಯಾಗಿ ತಮ್ಮ ಮಗಳ ಸಮಸ್ಯೆಯ ಬಗ್ಗೆ ಯಡಿಯೂರಪ್ಪ ಅವರ ಗಮನಕ್ಕೆ ತಂದು, ಸಹಾಯ ಕೇಳಿದ್ದಾರೆ. ತಕ್ಷಣವೇ 5 ಲಕ್ಷ ರೂ. ಗಳ ಪರಿಹಾರವನ್ನು ಯಡಿಯೂರಪ್ಪ ಪರಿಹಾರವಾಗಿ ಒದಗಿಸಿಕೊಡುವ ಮೂಲಕ ಮಾನವೀಯತೆ ಮೆರೆದಿದ್ದಾರೆ.
ಜನರ ಕಷ್ಟಗಳಿಗೆ ಸ್ಪಂದಿಸುವ ಮುಖ್ಯಮಂತ್ರಿ ಎಂದೇ ಹೆಸರಾಗಿರುವ ಮುಖ್ಯಮಂತ್ರಿ ಯಡಿಯೂರಪ್ಪ, ಆರಾಧ್ಯ ಚಿಕಿತ್ಸೆಗೂ ತಕ್ಷಣವೇ ಪರಿಹಾರ ಒದಗಿಸಿಕೊಟ್ಟು ನೆರವಾಗಿದ್ದಾರೆ. ಆ ಮೂಲಕ ಮಾನವೀಯ ಮೌಲ್ಯಗಳನ್ನು ಹೊಂದಿರುವ ಮುಖ್ಯಮಂತ್ರಿ ಎಂಬುದನ್ನು ಮತ್ತೊಮ್ಮೆ ಸಾಬೀತು ಮಾಡಿದ್ದಾರೆ. ಯಡಿಯೂರಪ್ಪ ಅವರ ಈ ನಿಲುವಿಗೆ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಅವರು ಧನ್ಯವಾದ ತಿಳಿಸಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.