ನವದೆಹಲಿ: ಕೋವಿಡ್ ಸಾಂಕ್ರಾಮಿಕ ಸೋಂಕಿನ ಕಾರಣದಿಂದ ಮುಂದೂಡಲ್ಪಟ್ಟ ಕೇಂದ್ರೀಯ ಶಿಕ್ಷಕರ ಅರ್ಹತಾ ಪರೀಕ್ಷೆ 2021 ರ ಜನವರಿ 13 ರಂದು ನಡೆಯಲಿದೆ ಎಂದು ಕೇಂದ್ರ ಸಚಿವ ರಮೇಶ್ ಪೋಖ್ರಿಯಾಲ್ ನಿಶಾಂಕ್ ಮಾಹಿತಿ ನೀಡಿದ್ದಾರೆ.
ಈ ಬಾರಿಯ ಜುಲೈ ತಿಂಗಳಲ್ಲಿ 14 ನೇ ಆವೃತ್ತಿಯ ಕೇಂದ್ರೀಯ ಶಿಕ್ಷಕರ ಅರ್ಹತಾ ಪರೀಕ್ಷೆ ದೇಶದಾದ್ಯಂತ 112 ಕ್ಷೇತ್ರಗಳಲ್ಲಿ ನಡೆಯಬೇಕಿತ್ತು. ಆದರೆ ಕೆಲವು ಆಡಳಿತಾತ್ಮಕ ಕಾರಣಗಳು ಮತ್ತು ಕೊರೋನಾ ಹಿನ್ನೆಲೆಯಲ್ಲಿ ಈ ಪರೀಕ್ಷೆ ನಡೆಯದೆ ಮುಂದೂಡಲ್ಪಟ್ಟಿತ್ತು. ಇದೀಗ ಈ ಪರೀಕ್ಷೆಗೆ ದಿನ ನಿಗದಿ ಪಡಿಸಿರುವ ಕೇಂದ್ರ ಸರ್ಕಾರ ಮುಂದಿನ ವರ್ಷದ ಜನವರಿ 13 ರಂದು ನಡೆಯಲಿದೆ ಎಂದು ಮಾಹಿತಿ ನೀಡಿದೆ.
ಈ ಪರೀಕ್ಷೆಯನ್ನು ಅಗತ್ಯ ಕೊರೋನಾ ಸುರಕ್ಷತಾ ಕ್ರಮಗಳನ್ನು ಅನುಸರಿಸಿ ದೇಶದ ಸುಮಾರು 135 ನಗರಗಳಲ್ಲಿ ನಡೆಸಲಾಗುವುದು ಎಂದು ತಿಳಿಸಿದ್ದಾರೆ. ಕೊರೋನಾ ಹಿನ್ನೆಲೆಯಲ್ಲಿ ಅಸಂಖ್ಯಾತ ಅಭ್ಯರ್ಥಿಗಳಿಂದ ಪರೀಕ್ಷೆ ನಡೆಯುವ ನಗರಗಳ ಬದಲಾವಣೆಗೆ ಸಂಬಂಧಿಸಿದಂತೆ ಅರ್ಜಿಗಳೂ ಬಂದಿವೆ. ಈ ಹಿನ್ನೆಲೆಯಲ್ಲಿ ನಗರದ ಬದಲಾವಣೆಗೆ ಅವಕಾಶ ನೀಡಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.