ಬೆಂಗಳೂರು: ಕೊರೋನಾ ಕರಿ ನೆರಳು ಭಾರತದ ಹಬ್ಬ ಹರಿದಿನಗಳ ಮೇಲೆಯೂ ಬಿದ್ದಿದೆ. ಕೊರೋನಾ ಕಾರಣದಿಂದ ಈ ಬಾರಿಯ ದೀಪಾವಳಿ ಹಬ್ಬದಲ್ಲಿ ಪಟಾಕಿ ಹಚ್ಚುವುದನ್ನು ನಿಷೇಧಿಸಲಾಗಿದೆ ಎಂದು ಮುಖ್ಯಮಂತ್ರಿ ಯಡಿಯೂರಪ್ಪ ತಿಳಿಸಿದ್ದಾರೆ.
ಈಗಾಗಲೇ ದೇಶದ ಹಲವು ರಾಜ್ಯಗಳು ದೀಪಾವಳಿಗೆ ಪಟಾಕಿ ನಿಷೇಧಿಸಿ ಆದೇಶ ಹೊರಡಿಸಿವೆ. ಇದೀಗ ಕರ್ನಾಟಕದಲ್ಲಿಯೂ ಪಟಾಕಿ ರಹಿತ ದೀಪಾವಳಿ ಆಚರಿಸಲು ರಾಜ್ಯ ಸರ್ಕಾರ ಆದೇಶ ಹೊರಡಿಸಲಿದೆ. ಈ ಸಂಬಂಧ ಸರ್ಕಾರದಿಂದ ಅಧಿಕೃತ ಆದೇಶ ಹೊರಡಿಸಲಾಗುವುದು ಎಂದು ಯಡಿಯೂರಪ್ಪ ಸುದ್ದಿಗಾರರಿಗೆ ತಿಳಿಸಿದ್ದಾರೆ.
ಈ ದೀಪಾವಳಿಯ ಸಂದರ್ಭದಲ್ಲಿ ಯಾರೂ ಪಟಾಕಿಗಳನ್ನು ಮಾರುವಂತಿಲ್ಲ ಮತ್ತು ಪಟಾಕಿ ಸಿಡಿಸುವಂತಿಲ್ಲ. ಪಟಾಕಿಯಿಂದಾಗಿ ವಾಯುಮಾಲಿನ್ಯ ಹೆಚ್ಚಾಗುವ ಸಾಧ್ಯತೆ ಇದೆ. ಜೊತೆಗೆ ಇದರಿಂದಾಗಿ ಕೊರೋನಾ ಸೋಂಕು ಹರಡುವ ತೀವ್ರತೆ ಸಹ ಹೆಚ್ಚಾಗುವ ಬಗ್ಗೆ ತಜ್ಞರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಆದ್ದರಿಂದ ಈ ದೀಪಾವಳಿಗೆ ಪಟಾಕಿಗೆ ನಿಷೇಧ ಹೇರಲಾಗಿದೆ ಎಂದು ಮುಖ್ಯಮಂತ್ರಿಗಳು ಮಾಹಿತಿ ನೀಡಿದ್ದಾರೆ. ಈ ಬಾರಿ ಪಟಾಕಿ ರಹಿತ ದೀಪಾವಳಿ ಆಚರಿಸೋಣ ಎಂದು ಅವರು ತಿಳಿಸಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.