ಕೋಲ್ಕತ್ತಾ: ಕೇಂದ್ರ ಗೃಹಸಚಿವ ಅಮಿತ್ ಶಾ ಅವರು ಇಂದಿನಿಂದ ಎರಡು ದಿನಗಳ ಪಶ್ಚಿಮಬಂಗಾಳ ಪ್ರವಾಸವನ್ನು ಹಮ್ಮಿಕೊಂಡಿದ್ದಾರೆ. ಕೋಲ್ಕತ್ತಾದ ದಕ್ಷಿಣೇಶ್ವರ ಕಾಳಿ ದೇಗುಲಕ್ಕೆ ಭೇಟಿ ನೀಡುವ ಮೂಲಕ ಅವರು ತಮ್ಮ ಪ್ರವಾಸವನ್ನು ಆರಂಭಿಸಿದ್ದಾರೆ.
ಈ ವೇಳೆ ಮಾತನಾಡಿದ ಅವರು, “ಪಶ್ಚಿಮಬಂಗಾಳ ಚೈತನ್ಯ ಮಹಾಪ್ರಭು, ರಾಮಕೃಷ್ಣ ಪರಮಹಂಸ ಮತ್ತು ವಿವೇಕಾನಂದರ ಭೂಮಿ. ಓಲೈಕೆ ರಾಜಕಾರಣ ರಾಜ್ಯದ ಪರಂಪರೆಗೆ ನೋವುಂಟುಮಾಡಿದೆ. ಆಧ್ಯಾತ್ಮ ಮತ್ತು ಧಾರ್ಮಿಕ ಜಾಗೃತಿಯ ಕೇಂದ್ರವಾಗಿರುವ ಈ ರಾಜ್ಯದ ವೈಭವವನ್ನು ಮತ್ತೆ ಮರಳಿ ತರುವ ಕರ್ತವ್ಯವನ್ನು ನಿಭಾಯಿಸುವಂತೆ ನಾನು ಇಲ್ಲಿನ ಜನರಿಗೆ ಮನವಿ ಮಾಡುತ್ತೇನೆ” ಎಂದಿದ್ದಾರೆ.
ಭೇಟಿಯ ಸಂದರ್ಭದಲ್ಲಿ ಅಮಿತ್ ಶಾ ಅವರು ವಿವಿಧ ಧಾರ್ಮಿಕ ಸ್ಥಳಗಳಿಗೆ ಭೇಟಿಯನ್ನು ನೀಡಿದ್ದಾರೆ. ಈ ವೇಳೆ ಅವರು ರಾಜ್ಯದ ಸಂಸ್ಕೃತಿಯನ್ನು ನಿರ್ಲಕ್ಷ್ಯ ಮಾಡುತ್ತಿರುವ ತೃಣಮೂಲ ಕಾಂಗ್ರೆಸ್ ನೇತೃತ್ವದ ಸರಕಾರವನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.
ಖ್ಯಾತ ಗಾಯಕ ಮತ್ತು ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ ಅಜಯ್ ಚಕ್ರವರ್ತಿ ಅವರನ್ನು ಕೂಡ ಭೇಟಿಯಾಗಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.