ಉಡುಪಿ: ಕೊರೋನಾ ಸೋಂಕಿಗೆ ಚಿಕಿತ್ಸೆ ಪಡೆಯುತ್ತಿದ್ದ, ಯಕ್ಷಗಾನ ತಾಳಮದ್ದಳೆಯ ಅರ್ಥಗಾರಿಕೆಯಲ್ಲಿ ಪ್ರಸಿದ್ಧಿ ಪಡೆದಿದ್ದ ಮಲ್ಪೆ ವಾಸುದೇವ ಸಾಮಗ (71) ಇಂದು ಇಹಲೋಕ ತ್ಯಜಿಸಿದ್ದಾರೆ.
ಕೊರೋನಾ ಸೋಂಕಿಗೆ ಚಿಕಿತ್ಸೆ ಪಡೆಯುತ್ತಿದ್ದ ಅವರು ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ ಎಂದು ಕುಟುಂಬ ವರ್ಗ ಮಾಹಿತಿ ನೀಡಿದೆ. ಮೃತರು ಪತ್ನಿ, ಪುತ್ರ ಸೇರಿದಂತೆ ಅಪಾರ ಬಂಧುಮಿತ್ರರನ್ನು ಅಗಲಿದ್ದಾರೆ. ಮೃತರು ಯಕ್ಷಗಾನನದ ದಿಗ್ಗಜ ಎಂದೇ ಪ್ರಸಿದ್ಧಿ ಪಡೆದಿದ್ದ ಹರಿದಾಸರಾದ ಮಲ್ಪೆ ರಾಮದಾಸ ಸಾಮಗರ ಪುತ್ರರಾಗಿದ್ದಾರೆ.
ಇವರು ತೆಂಕು ಮತ್ತು ಬಡಗು ತಿಟ್ಟಿನ ಯಕ್ಷಗಾನ ಪ್ರಕಾರಗಳಲ್ಲಿಯೂ ಇವರು ತಮ್ಮದೇ ಛಾಪು ಮೂಡಿಸಿದ್ದರು. ಇವರು 80 ಕ್ಕೂ ಅಧಿಕ ಯಕ್ಷಗಾನ ಪ್ರಸಂಗಗಳನ್ನು ರಚಿಸಿದ್ದು, ಯಕ್ಷ ಲೋಕಕ್ಕೆ ತಮ್ಮದೇ ಆದ ಕೊಡುಗೆಯನ್ನು ನೀಡಿದ್ದಾರೆ. ಜೊತೆಗೆ ಸಂಯಮ ಎಂಬ ತಾಳಮದ್ದಳೆ ತಂಡವನ್ನು ಕಟ್ಟಿದ್ದ ಸಾಮಗರು, ಜನಮೆಚ್ಚಿದ ಕಲಾವಿದರಾಗಿದ್ದರು. ಇವರು ವೇದ, ಉಪನಿಷತ್ತು, ಪುರಾಣ, ಮೀಮಾಂಸೆಗಳಲ್ಲಿಯೂ ಅಪಾರ ಪಾಂಡಿತ್ಯ ಹೊಂದಿದ್ದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.