ಬೆಂಗಳೂರು: ನಗರದ ಅಪಾರ್ಟ್ಮೆಂಟ್ಗಳಲ್ಲಿ ವಾಸಿಸುತ್ತಿರುವ ಕನ್ನಡಿಗರೇತರನ್ನು ಗಮನದಲ್ಲಿಟ್ಟುಕೊಂಡು, ಅವರಿಗೆ ಕನ್ನಡ ಭಾಷೆ ಕಲಿಸುವ ನಿಟ್ಟಿನಲ್ಲಿ ಮಹತ್ವದ ಕಾರ್ಯ ಯೋಜನೆಯೊಂದನ್ನು ಹಾಕಿಕೊಂಡಿದೆ.
ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಈ ಯೋಜನೆಯಂತೆ ಆಸಕ್ತರಿಗೆ ವಾರಾಂತ್ಯದಲ್ಲಿ ಕನ್ನಡ ತರಗತಿಗಳನ್ನು ನಡೆಸಲು ಮುಂದಾಗಿದೆ. ವಿಶೇಷವಾಗಿ ಸರ್ಜಾಪುರ, ವೈಟ್ಫೀಲ್ಡ್ ಸೇರಿದಂತೆ ಬೆಂಗಳೂರು ಪರಿಸರದ ಐಟಿ ಉದ್ಯೋಗಿಗಳು ಹೆಚ್ಚಾಗಿರುವ ಪ್ರದೇಶದಲ್ಲಿ ಇಂತಹ ತರಗತಿಗಳನ್ನು ನಡೆಸಲು ಕ್ರಮ ಕೈಗೊಳ್ಳಲಾಗುವುದು ಎಂದು ಕೆಡಿಎ ಅಧ್ಯಕ್ಷ ನಾಗಾಭರಣ ಮಾಹಿತಿ ನೀಡಿದ್ದಾರೆ.
ಇ-ಪೋರ್ಟಲ್ ಮೂಲಕ ಮಾತ್ರವಲ್ಲದೆ ನಗರದ ಹಲವು ಅಪಾರ್ಟ್ಮೆಂಟ್ಗಳಲ್ಲಿ ವಾರಾಂತ್ಯದಲ್ಲಿ ಕನ್ನಡ ತರಗತಿಗಳನ್ನು ನಡೆಸಲಾಗುವುದು ಎಂದು ಅವರು ಮಾಹಿತಿ ನೀಡಿದ್ದಾರೆ. ಈ ಹಿನ್ನೆಲೆಯಲ್ಲಿ ಈಗಾಗಲೇ ಸ್ವಯಂಸೇವಕರ ತಂಡವನ್ನು ಸಹ ಆಯೋಜನೆ ಮಾಡಲಾಗಿದೆ ಎಂದು ಅವರು ಮಾಹಿತಿ ನೀಡಿದ್ದಾರೆ. ಇವರು ನಗರದ ಹಲವು ಅಪಾರ್ಟ್ಮೆಂಟ್ಗಳಿಗೆ ಭೇಟಿ ನೀಡಿ ಕನ್ನಡ ತರಗತಿಗೆ ಹಾಜರಾಗಲು, ಕಲಿಯಲು ಆಸಕ್ತಿ ಹೊಂದಿರುವವರನ್ನು ಗುರುತಿಸಲಿದ್ದಾರೆ ಎಂದು ತಿಳಿಸಿದ್ದಾರೆ.
ನವೆಂಬರ್ ಅಂತ್ಯದ ವೇಳೆಗೆ ಈ ಸಮೀಕ್ಷೆ ಪೂರ್ಣಗೊಳಿಸಿ ಮುಂದಿನ ಕ್ರಮ ಕೈಗೊಳ್ಳಲಾಗುವುದಾಗಿ ಅವರು ಹೇಳಿದ್ದಾರೆ. ಕನಿಷ್ಠ 10 ಮಂದಿ ಕನ್ನಡ ಕಲಿಯಲು ಆಸಕ್ತಿ ತೋರಿಸುವ ಅಪಾರ್ಟ್ಮೆಂಟ್ಗಳಲ್ಲಿ ಕನ್ನಡ ತರಗತಿಗಳನ್ನು ನಡೆಸಲು ಕ್ರಮ ಕೈಗೊಳ್ಳುವ ಬಗ್ಗೆ ಅವರು ಮಾಹಿತಿ ನೀಡಿದ್ದಾರೆ. ಈ ತರಗತಿಗಳನ್ನು ಸಂಪೂರ್ಣ ಉಚಿತವಾಗಿ ನಡೆಸಲಾಗುತ್ತದೆ ಎಂದು ಅವರು ಮಾಹಿತಿ ನೀಡಿದ್ದಾರೆ.
ಆಸಕ್ತ ಅಪಾರ್ಟ್ಮೆಂಟ್ ಸಂಘಗಳು ಅಥವಾ ಸ್ವಯಂಸೇವಕರು ಕೆಡಿಎ ವೆಬ್ಸೈಟ್ https://kannadapraadhikaara.karnataka.gov.in ಗೆ ಭೇಟಿ ನೀಡುವಂತೆಯೂ ಅವರು ತಿಳಿಸಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.