ನವದೆಹಲಿ: ಬಿಗಿ ಭದ್ರತಾ ವ್ಯವಸ್ಥೆಗಳ ನಡುವೆ ಬಿಹಾರದಲ್ಲಿ ಇಂದು ಮೂರನೇ ಮತ್ತು ಅಂತಿಮ ಹಂತದ ವಿಧಾನಸಭಾ ಚುನಾವಣೆ ನಡೆದಿದೆ. ಇಂದು ಕಿಶನ್ಗಂಜ್, ಕತಿಹಾರ್, ಮಾಧೆಪುರ ಮತ್ತು ಸುಪಾಲ್ ಸೇರಿದಂತೆ 15 ಜಿಲ್ಲೆಗಳಲ್ಲಿ ವ್ಯಾಪಿಸಿರುವ 78 ಕ್ಷೇತ್ರಗಳಲ್ಲಿ ಮತದಾನ ಶಾಂತಿಯುತವಾಗಿ ನಡೆದಿದೆ.
ಈ ಹಂತದಲ್ಲಿ 110 ಮಹಿಳೆಯರು ಸೇರಿದಂತೆ 1,204 ಅಭ್ಯರ್ಥಿಗಳ ಭವಿಷ್ಯವನ್ನು 2.35 ಕೋಟಿ ಮತದಾರರು ಭದ್ರಪಡಿಸಿದ್ದಾರೆ. ಬೆಳಿಗ್ಗೆ 7 ಗಂಟೆಗೆ ಮತದಾನ ಪ್ರಾರಂಭವಾಗಿದ್ದು ಸಂಜೆ 6 ಗಂಟೆಗೆ ಕೊನೆಗೊಂಡಿದೆ.
ಒಟ್ಟು 243 ಸದಸ್ಯರ ಬಿಹಾರ ವಿಧಾನಸಭೆಗೆ ಮೂರು ಹಂತಗಳಲ್ಲಿ ಚುನಾವಣೆ ನಡೆದಿದೆ. ಮೊದಲ ಹಂತದ ಮತದಾನ ಅಕ್ಟೋಬರ್ 28 ರಂದು ಮತ್ತು ಎರಡನೇ ನವೆಂಬರ್ 3 ರಂದು ನಡೆಯಿತು.
ನವೆಂಬರ್ 10ರಂದು ಫಲಿತಾಂಶ ಪ್ರಕಟವಾಗಲಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.