ಬೆಂಗಳೂರು: ಕನ್ನಡ ರಾಜ್ಯೋತ್ಸವದ ಪ್ರಯುಕ್ತ ಇಂದು ನಗರದ ರವೀಂದ್ರ ಕಲಾಕ್ಷೇತ್ರದಲ್ಲಿ , 65 ಮಂದಿ ಸಾಧಕರಿಗೆ ರಾಜ್ಯೋತ್ಸವ ಪ್ರಶಸ್ತಿ ಪ್ರದಾನ ಸಮಾರಂಭ ನಡೆಯಿತು.
ಮುಖ್ಯಮಂತ್ರಿ ಯಡಿಯೂರಪ್ಪ ಅವರು ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರಿಗೆ ಪ್ರಶಸ್ತಿ ಪ್ರದಾನಿಸಿ ಮಾತನಾಡಿದ ಅವರು, ಕನ್ನಡ ಭಾಷೆ ತನ್ನದೇ ಆದ ಹಿರಿಮೆಯನ್ನು ಹೊಂದಿದೆ. ಭಾಷೆಯನ್ನು ಬಳಸಿದಷ್ಟು ಬೆಳೆಯಲು, ಅಭಿವೃದ್ಧಿ ಹೊಂದಲು ಸಾಧ್ಯವಾಗುತ್ತದೆ. ಕನ್ನಡ ಉಳಿಸುವತ್ತ, ಬೆಳೆಸುವತ್ತ ನಮ್ಮ ಕಾಯಕ ಸಾಗಲಿ ಎಂದು ನುಡಿದರು. ಈ ಬಾರಿ ಪ್ರಶಸ್ತಿ ಪಡೆದವರಿಗೆ ಕನ್ನಡ ನಾಡು, ನುಡಿಗೆ ಮತ್ತಷ್ಟು ಸೇವೆ ಸಲ್ಲಿಸುವ ಅವಕಾಶ ದೊರೆಯುವಂತಾಗಲಿ ಎಂದು ಯಡಿಯೂರಪ್ಪ ಹೇಳಿದರು.
ಕೊರೋನಾ ಹಿನ್ನೆಲೆಯಲ್ಲಿ ಸರಳ ಸಮಾರಂಭದ ಮೂಲಕ ಈ ಕಾರ್ಯಕ್ರಮವನ್ನು ನಡೆಸಲಾಯಿತು. ಕೊರೋನಾ ನಿಯಂತ್ರಣ ಕ್ರಮಗಳನ್ನು ಅನುಸರಿಸಿಕೊಂಡು ಪ್ರಶಸ್ತಿ ಪ್ರದಾನ ಸಮಾರಂಭವನ್ನು ಸರ್ಕಾರ ನಡೆಸಿದೆ. ಜೊತೆಗೆ ಸೀಮಿತ ಜನರಿಗಷ್ಟೇ ಈ ಕಾರ್ಯಕ್ರಮದಲ್ಲಿ ಭಾಗವಹಿಸುವ ಅವಕಾಶ ನೀಡಲಾಗಿದ್ದು, ಕೊರೋನಾ ನಿಯಮಗಳನ್ನು ಕಟ್ಟುನಿಟ್ಟಾಗಿ ಅನುಸರಿಸುವಂತೆ ಸೂಚಿಸಲಾಗಿತ್ತು.
ಕಾರ್ಯಕ್ರಮದಲ್ಲಿ ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ, ಉಪಮುಖ್ಯಮಂತ್ರಿ ಡಾ ಅಶ್ವತ್ಥ್ ನಾರಾಯಣ, ಉಪಮುಖ್ಯಮಂತ್ರಿ ಲಕ್ಷ್ಮಣ್ ಸವದಿ, ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ ರವಿ, ಸಂಸದ ತೇಜಸ್ವಿ ಸೂರ್ಯ ಸೇರಿದಂತೆ ಇನ್ನಿತರ ಗಣ್ಯರು ಉಪಸ್ಥಿತರಿದ್ದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.