ನವದೆಹಲಿ: ಕೊರೋನಾ ಸಂಕಷ್ಟದ ಹಿನ್ನೆಲೆಯಲ್ಲಿ ದೇಶದಲ್ಲಿ ಈ ಬಾರಿ ನಗದು ವಹಿವಾಟು 50% ಇಳಿಕೆಯಾಗಿದೆ ಎಂದು ಲೋಕಲ್ ಸರ್ಕಲ್ಸ್ ನಡೆಸಿದ ಸಮೀಕ್ಷೆಯಲ್ಲಿ ಬಹಿರಂಗವಾಗಿದೆ.
ಜನರು ನಗದು ವ್ಯವಹಾರಕ್ಕಿಂತ ಹೆಚ್ಚಾಗಿ ಡಿಜಿಟಲ್ ಪಾವತೀಕರಣದತ್ತ ಹೆಚ್ಚು ಒಲವು ಹೊಂದಿದ್ದಾರೆ ಎಂದು ಈ ಸಮೀಕ್ಷೆ ತಿಳಿಸಿದೆ. ಕಳೆದ ವರ್ಷದ ಫಲಿತಾಂಶದ ಜೊತೆಗೆ ಈ ಬಾರಿಯ ಫಲಿತಾಂಶವನ್ನು ಹೋಲಿಕೆ ಮಾಡಲಾಗಿದ್ದು, ಇದರಿಂದ ಈ ಅಂಶ ಬಯಲಾಗಿದೆ ಎಂದು ತಿಳಿದುಬಂದಿದೆ. ಕಳೆದ 12 ತಿಂಗಳುಗಳಲ್ಲಿ ನಗದು ರಹಿತ ವ್ಯವಹಾರವೇ ಅಧಿಕವಾಗಿದೆ ಎಂದು ತಿಳಿಸಿದೆ.
ಈ ವರ್ಷದಲ್ಲಿ ಡಿಜಿಟಲ್ ಪಾವತಿ ಸಂಖ್ಯೆ 3 ಸಾವಿರ ಕೋಟಿಗೆ ಹೆಚ್ಚಳವಾಗಿದೆ. ಕೊರೋನಾ ಹಿನ್ನೆಲೆಯಲ್ಲಿ ಸಾರ್ವಜನಿಕ ಅಂತರ ಕಾಪಾಡಿಕೊಳ್ಳುವುದು ಸೇರಿದಂತೆ ಇನ್ನಿತರ ಕಾರಣಗಳಿಂದ ನಗದು ಪಾವತಿಗೆ ಹಿಂದೇಟು ಹಾಕುತ್ತಿದ್ದಾರೆ. ಜೊತೆಗೆ ಡಿಜಿಟಲ್ ಪಾವತಿಗೆ ಹೆಚ್ಚಿನ ಜನರು ಆದ್ಯತೆ ನೀಡುತ್ತಿದ್ದಾರೆ. ಈ ಬಾರಿ 3,434.56 ಕೋಟಿಗಳಷ್ಟು ಡಿಜಿಟಲ್ ವಹಿವಾಟು ನಡೆದಿದೆ ಎಂದು ಈ ಸಮೀಕ್ಷೆ ಮಾಹಿತಿ ನೀಡಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.