ಬೆಂಗಳೂರು: ಕೊರೋನಾ ಲಾಕ್ಡೌನ್ ಬಳಿಕ ಮೊದಲ ಬಾರಿಗೆ ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೋ) ಇಂದು ಹೊಸ ಉಪಗ್ರಹಗಳನ್ನು ಶ್ರೀಹರಿಕೋಟಾದಲ್ಲಿರುವ ಲಾಂಚ್ ಪ್ಯಾಡ್ನಿಂದ ಉಡಾವಣೆ ಮಾಡಿದೆ.
ಶ್ರೀಹರಿಕೋಟಾದ ಸತೀಶ್ ಧವನ್ ಬಾಹ್ಯಾಕಾಶ ಕೇಂದ್ರದಿಂದ ಪಿಎಸ್ಎಲ್ವಿ-ಸಿ 49 ರಾಕೆಟ್ ಮುಖೇನ ಈ ಉಪಗ್ರಹಗಳನ್ನು ಉಡಾಯಿಸಲಾಗಿದೆ. ಇದರಲ್ಲಿ ಇಒಎಸ್-01 ಉಪಗ್ರಹ ಸೇರಿದಂತೆ ಹತ್ತು ಉಪಗ್ರಹಗಳನ್ನು ಇಸ್ರೋ ಇಂದು ಮಧ್ಯಾಹ್ನ ಬಾಹ್ಯಾಕಾಶಕ್ಕೆ ಕಳುಹಿಸಿದೆ. ಇಒಎಸ್-01 ಹೊರತು ಪಡಿಸಿದಂತೆ ಉಳಿದೆಲ್ಲವುಗಳು ಅಂತರಾಷ್ಟ್ರೀಯ ಉಪಗ್ರಹಗಳಾಗಿವೆ. ಈ ಉಡಾವಣೆ ಯಶಸ್ವಿಯಾಗಿದೆ ಎಂದು ಮೂಲಗಳು ತಿಳಿಸಿವೆ.
ಮಧ್ಯಾಹ್ನ 3.02 ಕ್ಕೆ ಸರಿಯಾಗಿ ಈ ಉಪಗ್ರಹಗಳನ್ನು ಉಡಾವಣೆ ಮಾಡಲಾಗಿದೆ. ಇಒಎಸ್-01 ಬಗ್ಗೆ ಇಸ್ರೋ ಮಾಹಿತಿ ನೀಡಿದ್ದು, ಈ ಉಪಗ್ರಹ ಭೂ ವೀಕ್ಷಣಾ ಉಪಗ್ರಹವಾಗಿದೆ. ಕೃಷಿ, ಅರಣ್ಯ ಹಾಗೂ ವಿಪತ್ತು ನಿರ್ವಹಣೆಗೆ ಸಹಕರಿಸಲಿದೆ ಎಂದು ಸಂಸ್ಥೆ ತಿಳಿಸಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.