ನವದೆಹಲಿ: ಕೇಂದ್ರ ಮಾಹಿತಿ ಆಯೋಗದ ಮುಖ್ಯ ಆಯುಕ್ತರಾಗಿ, ಮಾಜಿ ರಾಜತಾಂತ್ರಿಕ ಅಧಿಕಾರಿ, ಹಾಲಿ ಮಾಹಿತಿ ಆಯುಕ್ತ ಯಶವರ್ಧನ್ ಕುಮಾರ್ ಸಿನ್ಹಾ ಅವರನ್ನು ನೇಮಕ ಮಾಡಲಾಗಿದೆ.
ಈ ಸಂಬಂಧ ರಾಷ್ಟ್ರಪತಿ ಭವನದ ಪ್ರಕಟಣೆ ಮಾಹಿತಿ ನೀಡಿದೆ. ಜೊತೆಗೆ ರಾಷ್ಟ್ರಪತಿ ಭವನದಲ್ಲಿ ನಡೆದ ಸಮಾರಂಭದಲ್ಲಿ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ಸಿನ್ಹಾಗೆ ಪ್ರತಿಜ್ಞಾ ವಿಧಿ ಬೋಧಿಸಿದ್ದಾರೆ. ಸಿನ್ಹಾ 2019 ರ ಜನವರಿ 1 ರಂದು ಮಾಹಿತಿ ಆಯುಕ್ತರಾಗಿ ನೇಮಕವಾಗಿದ್ದರು. ಭಾರತದ ಹೈಕಮಿಷನರ್ ಆಗಿ ಅವರು ಬ್ರಿಟನ್, ಶ್ರೀಲಂಕಾಗಳಲ್ಲಿಯೂ ಕಾರ್ಯ ನಿರ್ವಹಿಸಿದ ಅನುಭವ ಹೊಂದಿದ್ದಾರೆ.
ಈ ಹಿಂದಿನ ಮುಖ್ಯ ಆಯುಕ್ತರ ಅಧಿಕಾರಾವಧಿ ಆಗಸ್ಟ್ 26 ಕ್ಕೆ ಕೊನೆಯಾಗಿತ್ತು. ಇದೀಗ ಯಶವರ್ಧನ್ ಕುಮಾರ್ ಸಿನ್ಹಾ ಅವರು ಆಯುಕ್ತರಾಗಿ ಪ್ರತಿಜ್ಞೆ ಸ್ವೀಕರಿಸಿದ್ದಾರೆ. ಇವರು ಮುಂದಿನ ಮೂರು ವರ್ಷಗಳ ಕಾಲ ಕಾರ್ಯ ನಿರ್ವಹಿಸಲಿದ್ದಾರೆ. ಸಿನ್ಹಾ ಅವರಿಗೆ ಈಗ 62 ವರ್ಷಗಳಾಗಿದ್ದು, ಮಾಹಿತಿ ಆಯುಕ್ತರ ಸೇವಾವಧಿ 65 ವರ್ಷಗಳಾಗಿರುತ್ತದೆ. ಈ ಹಿನ್ನೆಲೆಯಲ್ಲಿ ಅವರು ಮುಂದಿನ ಮೂರು ವರ್ಷಗಳ ಕಾಲ ಕಾರ್ಯ ನಿರ್ವಹಿಸಲಿದ್ದಾರೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಮೂವರು ಸದಸ್ಯರನ್ನೊಳಗೊಂಡ ಸಮಿತಿ ಸಿನ್ಹಾ ಅವರನ್ನು ಈ ಹುದ್ದೆಗೆ ಆಯ್ಕೆ ಮಾಡಿತ್ತು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.