
ಕುಂದಾಪುರ: ನಗರದ ಪುರಸಭಾ ವ್ಯಾಪ್ತಿಯ ಹಲವು ಪ್ರದೇಶಗಳಿಂದ ಭಿಕ್ಷಾಟನೆ ನಿರತ 11 ಮಂದಿ ಮಕ್ಕಳನ್ನು ರಕ್ಷಣೆ ಮಾಡಲಾಗಿದೆ.
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಮಕ್ಕಳ ರಕ್ಷಣಾ ಘಟಕ, ಕುಂದಾಪುರ ಪುರಸಭೆ, ಪೊಲೀಸ್ ಇಲಾಖೆ, ಕಾರ್ಮಿಕ ಇಲಾಖೆ, ಸಮಾಜ ಕಲ್ಯಾಣ ಇಲಾಖೆ, ಮಕ್ಕಳ ಸಹಾಯವಾಣಿ, ವಿಶ್ವಾಸದ ಮನೆ ಸಂಸ್ಥೆ ಮೊದಲಾದವುಗಳು ನಡೆಸಿರುವ ಜಂಟಿ ಕಾರ್ಯಾಚರಣೆಯಲ್ಲಿ 11 ಮಂದಿ ಮಕ್ಕಳನ್ನು ರಕ್ಷಣೆ ಮಾಡಲಾಗಿದೆ.
ನಗರದ ಹೊಸ ಬಸ್ಸು ನಿಲ್ದಾಣ, ವಾರದ ಸಂತೆ ಮಾರುಕಟ್ಟೆ, ಶಾಸ್ತ್ರಿ ಸರ್ಕಲ್, ಪೇಟೆ ಪ್ರದೇಶ ಮೊದಲಾದೆಡೆಗಳಲ್ಲಿ ಈ ಕಾರ್ಯಾಚರಣೆ ನಡೆಸಲಾಗಿದ್ದು 9 ಮಂದಿ ಹೆಣ್ಣು ಮಕ್ಕಳನ್ನು ಮತ್ತು 2 ಮಂದಿ ಗಂಡು ಮಕ್ಕಳನ್ನು ರಕ್ಷಿಸಿದ್ದಾರೆ. ಈ ಮಕ್ಕಳು ಶಿರಸಿ ಮತ್ತು ಹಾವೇರಿ ಮೂಲದವರಾಗಿದ್ದಾರೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಸದ್ಯ ಈ ಮಕ್ಕಳಿಗೆ ಪುನರ್ವಸತಿ ಕಲ್ಪಿಸುವ ನಿಟ್ಟಿನಲ್ಲಿ ನಿಟ್ಟೂರಿನ ಮಕ್ಕಳ ಕಲ್ಯಾಣ ಸಮಿತಿಗೆ ಕಳುಹಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.


