ಶಿವಮೊಗ್ಗ: ಕೊರೋನಾ ಸಂಕಷ್ಟ ಆರಂಭವಾದ ಬಳಿಕ ವಿದ್ಯಾರ್ಥಿಗಳ ಬದುಕು ಅತಂತ್ರವಾಗಿದೆ. ಇದರಿಂದ ಗ್ರಾಮೀಣ ಭಾಗದ ವಿದ್ಯಾರ್ಥಿಗಳು ಹೆಚ್ಚು ಸಮಸ್ಯೆ ಅನುಭವಿಸುವಂತಾಗಿದೆ. ಈ ಹಿನ್ನೆಲೆಯಲ್ಲಿ ಗ್ರಾಮೀಣ ವಿದ್ಯಾರ್ಥಿಗಳಿಗೆ ಬೇಕಾದ ಎಲ್ಲಾ ರೀತಿಯ ನೆರವನ್ನು ಒದಗಿಸಿ ಕೊಡಲು ರಾಜ್ಯ ಸರ್ಕಾರ ಸಿದ್ಧವಿದೆ ಎಂದು ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ತಿಳಿಸಿದ್ದಾರೆ.
ನಗರದಲ್ಲಿ ರೋಟರಿ ಕ್ಲಬ್ನ ಜಂಟಿ ಸಹಭಾಗಿತ್ವದಲ್ಲಿ ನಡೆದ ಜ್ಞಾನ ದೀವಿಗೆ ಕಾರ್ಯಕ್ರಮ ಮತ್ತು ವಿದ್ಯಾರ್ಥಿಗಳಿಗೆ ಟ್ಯಾಬ್ ವಿತರಿಸುವ ಕಾರ್ಯಕ್ರಮದಲ್ಲಿ ವರ್ಚುವಲ್ ಆಗಿ ಭಾಗವಹಿಸಿ ಅವರು ಮಾತನಾಡಿದರು.
ಇತ್ತೀಚೆಗೆ ಕೊರೋನಾ ಕಾರಣದಿಂದ ಆನ್ಲೈನ್ ಶಿಕ್ಷಣ ಕ್ರಮ ಜಾರಿಯಲ್ಲಿದೆ. ಗ್ರಾಮೀಣ ಪ್ರದೇಶದ ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳು ನೆಟ್ವರ್ಕ್ ಸಮಸ್ಯೆಯಿಂದ ಕಲಿಕೆಯಲ್ಲಿ ತೊಂದರೆ ಅನುಭವಿಸುತ್ತಿರುವುದು ಸರ್ಕಾರದ ಗಮನದಲ್ಲಿದೆ. ಅಂತಹ ವಿದ್ಯಾರ್ಥಿಗಳಿಗೆ ನೆರವು ಒದಗಿಸಿಕೊಡುವ ನಿಟ್ಟಿನಲ್ಲಿ ಸರ್ಕಾರ ಪೂರಕ ಕ್ರಮಗಳನ್ನು ಕೈಗೊಳ್ಳುತ್ತಿದೆ. ಸರ್ಕಾರ ತೆಗೆದುಕೊಳ್ಳುವ ಇಂತಹ ಕ್ರಮಗಳಲ್ಲಿ ಖಾಸಗಿ ಸಂಸ್ಥೆಗಳು ಸಹ ಕೈಜೋಡಿಸಬೇಕು ಎಂದು ಯಡಿಯೂರಪ್ಪ ಮನವಿ ಮಾಡಿದ್ದಾರೆ.
ಕೊರೋನಾ ಶಿಕ್ಷಣ ವ್ಯವಸ್ಥೆಯ ಮೇಲೆ ಅಡ್ಡ ಪರಿಣಾಮ ಬೀರಿದೆ. ಇದನ್ನು ಸರಿಪಡಿಸಲು ಸರ್ಕಾರ ಆನ್ಲೈನ್ ಶಿಕ್ಷಣ ಸೇರಿದಂತೆ ಇನ್ನಿತರ ಅಗತ್ಯ ಕ್ರಮಗಳನ್ನು ಕೈಗೊಂಡಿದೆ. ಮುಂದಿನ ದಿನಗಳಲ್ಲಿ ಜ್ಞಾನ ದೀವಿಗೆಯ ಮೂಲಕವೂ ವಿದ್ಯಾರ್ಥಿಗಳು ಶಿಕ್ಷಣದ ಅಗತ್ಯಗಳನ್ನು ಪೂರೈಸಿಕೊಳ್ಳಲಿದ್ದಾರೆ. ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿಯೂ ಈ ಕಾರ್ಯಕ್ರಮ ಜಾರಿಯಾಗಲಿದೆ ಎಂದು ಮುಖ್ಯಮಂತ್ರಿಗಳು ಮಾಹಿತಿ ನೀಡಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.