ಬೆಂಗಳೂರು: ರಾಜರಾಜೇಶ್ವರಿ ನಗರ ಮತ್ತು ಶಿರಾ ಕ್ಷೇತ್ರಗಳ ಉಪಚುನಾವಣೆಯ ಮತ ಎಣಿಕೆ ಕಾರ್ಯ ಬೆಳಗ್ಗೆ 8 ಗಂಟೆಯಿಂದಲೇ ಆರಂಭವಾಗಿದೆ.
ಈ ಎರಡೂ ಕ್ಷೇತ್ರಗಳು ಬಿಜೆಪಿ, ಕಾಂಗ್ರೆಸ್ ಮತ್ತು ಜೆಡಿಎಸ್ ಪಕ್ಷಗಳಿಗೆ ಪ್ರತಿಷ್ಠೆಯ ವಿಚಾರವಾಗಿದ್ದು, ಮತದಾರ ಯಾವ ಅಭ್ಯರ್ಥಿಯ ಮೇಲೆ ಭರವಸೆ ಇರಿಸಿದ್ದಾನೆ ಎಂಬುದಕ್ಕೆ ಮಧ್ಯಾಹ್ನ ವೇಳೆಗೆ ಸ್ಪಷ್ಟ ಉತ್ತರ ಸಿಗಲಿದೆ.
ಶಿರಾದಲ್ಲಿ ಒಟ್ಟು 15 ಅಭ್ಯರ್ಥಿಗಳು ಚುನಾವಣೆ ಎದುರಿಸಿದ್ದು, ಬಿಜೆಪಿಯಿಂದ ರಾಜೇಶ್ ಗೌಡ, ಕಾಂಗ್ರೆಸ್ನಿಂದ ಟಿಬಿ ಜಯಚಂದ್ರ, ಜೆಡಿಎಸ್ನಿಂದ ಅಮ್ಮಾಜಮ್ಮ ಸ್ಪರ್ಧೆ ಮಾಡಿದ್ದರು. ಇವರಲ್ಲಿ ಮತದಾರ ಯಾರ ಮೇಲೆ ನಂಬಿಕೆ ಇರಿಸಿದ್ದಾನೆ ಎಂಬುದಕ್ಕೆ ಸ್ಪಷ್ಟ ಉತ್ತರ ಇನ್ನೇನು ಹೊರಬೀಳಲಿದೆ. ಅದರಂತೆಯೇ ಆರ್ಆರ್ ನಗರದಲ್ಲಿ ಬಿಜೆಪಿಯಿಂದ ಮುನಿರತ್ನ, ಕಾಂಗ್ರೆಸ್ ನಿಂದ ಕುಸುಮಾ ಮತ್ತು ಜೆಡಿಎಸ್ ಪಕ್ಷದಿಂದ ಕೃಷ್ಣಮೂರ್ತಿ ಸ್ಪರ್ಧಿಸಿದ್ದು, ಮತದಾರನ ಒಲವು ಯಾರತ್ತ ಎಂಬುದಕ್ಕೂ ಇಂದು ಉತ್ತರ ದೊರೆಯಲಿದೆ.
ಮತ ಎಣಿಕೆ, ಫಲಿತಾಂಶದ ಹಿನ್ನೆಲೆಯಲ್ಲಿ ಎರಡೂ ಕ್ಷೇತ್ರಗಳಲ್ಲಿಯೂ ಅಗತ್ಯ ಮುನ್ನೆಚ್ಚರಿಕಾ ಕ್ರಮಗಳನ್ನು ವಹಿಸಲಾಗಿದ್ದು, ಬಿಗಿ ಪೊಲೀಸ್ ಬಂದೋಬಸ್ತ್ ಕಲ್ಪಿಸಲಾಗಿದೆ.
ಜೊತೆಗೆ ಕೆಲ ದಿನಗಳ ಹಿಂದಷ್ಟೇ ನಡೆದಿದ್ದ ವಿಧಾನ ಪರಿಷತ್ನ ಪದವೀಧರ ಮತ್ತು ಶಿಕ್ಷಕರ ಕ್ಷೇತ್ರದ 4 ಕ್ಷೇತ್ರಗಳ ಮತ ಎಣಿಕೆ ಕಾರ್ಯವೂ ಆರಂಭವಾಗಿದೆ. ಇದರ ಫಲಿತಾಂಶಕ್ಕಾಗಿಯೂ ರಾಜಕೀಯ ಪಕ್ಷಗಳು, ಅಭ್ಯರ್ಥಿಗಳು ಕಾತರದಿಂದ ಕಾಯುತ್ತಿದ್ದಾರೆ. ಇನ್ನೇನು ಕೆಲವೇ ಹೊತ್ತಿನಲ್ಲಿ ವಿಧಾನ ಪರಿಷತ್ ಫಲಿತಾಂಶ ಸಹ ಪ್ರಕಟವಾಗಲಿದ್ದು ಯಾವ ಅಭ್ಯರ್ಥಿಗಳು ಗೆಲುವಿನ ಕಿರೀಟ ಧರಿಸಲಿದ್ದಾರೆ ಎಂಬುದಕ್ಕೆ ಉತ್ತರ ದೊರೆಯಲಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.