ಬೆಂಗಳೂರು: ರಾಜ್ಯದಲ್ಲಿ ಕಳೆದ ಆಗಸ್ಟ್ ತಿಂಗಳಿನಿಂದ ಈ ವರೆಗೆ ಸುರಿದ ಭೀಕರ ಮಳೆ, ಪ್ರವಾಹಕ್ಕೆ ಸುಮಾರು 25 ಸಾವಿರ ಕೋಟಿ ರೂ. ಗಳಷ್ಟು ನಷ್ಟವಾಗಿದೆ ಎಂದು ರಾಜ್ಯ ಸರ್ಕಾರ ಕೇಂದ್ರ ಸರ್ಕಾರಕ್ಕೆ ವರದಿಯನ್ನು ಸಲ್ಲಿಸಿದೆ.
ಮಳೆ ಹಾನಿ, ನೆರೆ, ಪ್ರವಾಹಕ್ಕೆ ಸಂಬಂಧಿಸಿದಂತೆ ಮೂರು ಹಂತಗಳಲ್ಲಿ ರಾಜ್ಯ ಸರ್ಕಾರ ಕೇಂದ್ರ ಸರ್ಕಾರಕ್ಕೆ ವರದಿ ನೀಡಿದೆ. 20.86 ಲಕ್ಷ ಹೆಕ್ಟೇರ್ ಬೆಳೆ ನಾಶ, ಮನೆ ಹಾನಿ, ಮೂಲಸೌಕರ್ಯಗಳ ಹಾನಿಗೆ ಸಂಬಂಧಿಸಿದಂತೆ 24,941.73 ಕೋಟಿಗಳಷ್ಟು ನಷ್ಟ ಉಂಟಾಗಿದೆ. ಈ ವರದಿಯನ್ನು ಇದೀಗ ಮೂರನೇ ಹಂತದಲ್ಲಿ ರಾಜ್ಯ ಸರ್ಕಾರ ಕೇಂದ್ರಕ್ಕೆ ಸಲ್ಲಿಸಿದೆ ಎಂಬುದಾಗಿ ಮೂಲಗಳು ತಿಳಿಸಿವೆ.
ಅ. 1- ಸೆ. 15 ರ ವರೆಗೆ 9440.85 ಕೋಟಿ ರೂ. , ಸೆ. 16-ಸೆ. 30 ರ ವರೆಗೆ 5,667.84 ಕೋಟಿ ರೂ., ಅಕ್ಟೋಬರ್ ತಿಂಗಳಿನಲ್ಲಿ ಸಲ್ಲಿಸಲಾದ ಮನವಿಯಲ್ಲಿ 9,833.04 ಕೋಟಿ ರೂ. ನಷ್ಟ ಸಂಭವಿಸಿರುವ ಬಗ್ಗೆ ರಾಜ್ಯ ಸರ್ಕಾರ ವರದಿ ನೀಡಿದೆ. 18.05 ಲಕ್ಷ ಬೆಳೆ ನಾಶದ ಅಂದಾಜು ಮೌಲ್ಯ 14,714 ಕೋಟಿ ರೂ., 1.99 ಲಕ್ಷ ಹೆಕ್ಟೇರ್ ತೋಟಗಾರಿಕಾ ಬೆಳೆ ನಾಶದ ಅಂದಾಜು ಮೌಲ್ಯ 2,432 ಕೋಟಿ ರೂ., 55,808 ಹೆಕ್ಟೇರ್ ಮರ ಆಧಾರಿತ ಬೆಳೆ ನಾಶದ ಅಂದಾಜು ಮೌಲ್ಯ 6,465 ಕೋಟಿ ರೂ., 48,424 ಮನೆಗಳಿಗೆ ಹಾನಿಯ ಅಂದಾಜು ಮೌಲ್ಯ 466.2 ಕೋಟಿ ರೂ. ನಷ್ಟ ಉಂಟಾಗಿರುವ ಬಗ್ಗೆ ಈ ವರದಿಯಲ್ಲಿ ರಾಜ್ಯ ಸರ್ಕಾರ ಉಲ್ಲೇಖಿಸಿದೆ. ಜೊತೆಗೆ 37,806 ಕಿಮೀ ರಸ್ತೆ ಗಳಿಗೂ ಹಾನಿಯಾಗಿದೆ ಎಂದು ವರದಿಯಲ್ಲಿ ಕೇಂದ್ರದ ಗಮನಕ್ಕೆ ತರಲಾಗಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.