ಭೋಪಾಲ್: ಮಧ್ಯಪ್ರದೇಶ ಉಪ ಚುನಾವಣೆಯಲ್ಲಿ 28 ಕ್ಷೇತ್ರಗಳ ಪೈಕಿ ಬಿಜೆಪಿ 18 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದ್ದು, ಕಾಂಗ್ರೆಸ್ 9 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದೆ. ಬಿಜೆಪಿಯ ಶಿವರಾಜ್ ಸಿಂಗ್ ಚೌವ್ಹಾಣ್ ಸರ್ಕಾರದ ಉಳಿವಿಗೆ ಅತ್ಯಂತ ನಿರ್ಣಾಯಕ ಚುನಾವಣೆ ಇದೆಂದು ಹೇಳಲಾಗಿತ್ತು.
ಇದೀಗ ಬಿಜೆಪಿ 28 ವಿಧಾನಸಭಾ ಕ್ಷೇತ್ರಗಳ ಪೈಕಿ 18 ರಲ್ಲಿ ಮುನ್ನಡೆ ಸಾಧಿಸಿದೆ. ಕಾಂಗ್ರೆಸ್ 9 ಸ್ಥಾನಗಳಲ್ಲಿ ಮುನ್ನಡೆ ಪಡೆದುಕೊಂಡಿದೆ.
ಮಧ್ಯ ಪ್ರದೇಶದಲ್ಲಿ ಸರ್ಕಾರ ಉಳಿಸಿಕೊಳ್ಳಲು ಈ ಉಪ ಚುನಾವಣೆಯಲ್ಲಿ ಬಿಜೆಪಿ ಕನಿಷ್ಠ 8 ಕ್ಷೇತ್ರಗಳಲ್ಲಿ ಗೆಲುವು ಸಾಧಿಸಬೇಕಿದೆ. ಮಧ್ಯ ಪ್ರದೇಶದಲ್ಲಿ ಕನಿಷ್ಠ ಬಹುಮತಕ್ಕೆ ಬೇಕಾದ ಮ್ಯಾಜಿಕ್ ನಂಬರ್ 229 ಆಗಿದೆ. ಪ್ರಸ್ತುತ ಬಿಜೆಪಿ ಬಳಿ 107 ಶಾಸಕರ ಬೆಂಬಲವಿದ್ದು, ಕಾಂಗ್ರೆಸ್ 87 ಶಾಸಕರನ್ನು ಹೊಂದಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.