ನವದೆಹಲಿ: ದೇಶದ ಆಹಾರ ಸಂಸ್ಕರಣಾ ವಲಯಕ್ಕೆ ಉತ್ತೇಜನವನ್ನು ನೀಡುವ ನಿಟ್ಟಿನಲ್ಲಿ ಏಕೀಕೃತ ಕೋಲ್ಡ್ ಸ್ಟೋರೆಜ್ ಮತ್ತು ಮೌಲ್ಯ ಸೇರ್ಪಡೆ ಯೋಜನೆಯಡಿ ಕೇಂದ್ರ ಸರ್ಕಾರ 29 ಯೋಜನೆಗಳಿಗೆ ಅನುಮೋದನೆಯನ್ನು ನೀಡಿದೆ.
ದೇಶಾದ್ಯಂತ ಹಣ್ಣುಗಳು ಮತ್ತು ತರಕಾರಿಗಳು, ಸಾಗರ ಉತ್ಪನ್ನ / ಮೀನುಗಾರಿಕೆ, ಆರ್ಟಿಇ (ತಿನ್ನಲು ಸಿದ್ಧ), ಮಾಂಸ ಮತ್ತು ಕೋಳಿಗೆ ಸಂಬಂಧಿಸಿದ 29 ಯೋಜನೆಗಳಿಗೆ ಸರ್ಕಾರ ಅನುಮೋದನೆ ನೀಡಿದೆ. ಇದು 15 ಸಾವಿರಕ್ಕೂ ಹೆಚ್ಚು ಜನರಿಗೆ ಉದ್ಯೋಗವನ್ನು ನೀಡುತ್ತದೆ ಎಂದು ಆಹಾರ ಸಂಸ್ಕರಣಾ ಸಚಿವಾಲಯ ಸೋಮವಾರ ಪ್ರಕಟಣೆಯಲ್ಲಿ ತಿಳಿಸಿದೆ.
ಕೇಂದ್ರ ಆಹಾರ ಸಂಸ್ಕರಣಾ ಕೈಗಾರಿಕಾ ಸಚಿವ ನರೇಂದ್ರ ಸಿಂಗ್ ತೋಮರ್ ಅವರ ಅಧ್ಯಕ್ಷತೆಯಲ್ಲಿ ನಡೆದ ಅಂತರ್-ಸಚಿವ ಅನುಮೋದನೆ ಸಮಿತಿ (ಐಎಂಎಸಿ) ಸಭೆಯು 21 ಯೋಜನೆಗಳಿಗೆ ಅನುಮೋದನೆ ನೀಡಿತು. 443 ಕೋಟಿ ರೂ.ಗಳ ಹೂಡಿಕೆ ಮತ್ತು ಏಕೀಕೃತ ಕೋಲ್ಡ್ ಚೈನ್ ಮತ್ತು ಮೌಲ್ಯ ಸೇರ್ಪಡೆಯ ಯೋಜನೆಯಡಿ 189 ಕೋಟಿ ರೂಪಾಯಿ ಬೆಂಬಲವನ್ನು ಇದು ಪಡೆಯಲಿದೆ.
ಈ ಯೋಜನೆಗಳಿಂದ ರೈತರಿಗೆ ಮತ್ತು ಗ್ರಾಹಕರಿಗೆ ಅನುಕೂಲವಾಗಲಿದೆ ಎಂದು ತೋಮರ್ ಹೇಳಿದ್ದಾರೆ. ಅನುಮೋದಿತ ಯೋಜನೆಗಳ ಅನುಷ್ಠಾನವನ್ನು ತ್ವರಿತಗೊಳಿಸಬೇಕು ಎಂದು ಅವರು ಅಧಿಕಾರಿಗಳನ್ನು ಕೋರಿದರು. ಇಪ್ಪತ್ತೊಂದು ಯೋಜನೆಗಳು ಸುಮಾರು 15,000 ಜನರಿಗೆ ಉದ್ಯೋಗ ಸೃಷ್ಟಿಸುವ ಸಾಧ್ಯತೆಯಿದೆ ಮತ್ತು 200,592 ರೈತರಿಗೆ ಅನುಕೂಲ ಮಾಡಿಕೊಡಲಿದೆ ಎಂದು ಸಚಿವಾಲಯ ತಿಳಿಸಿದೆ.
ಈ ಯೋಜನೆಗಳು ಆಂಧ್ರಪ್ರದೇಶ, ಗುಜರಾತ್, ಹಿಮಾಚಲ ಪ್ರದೇಶ, ಜಮ್ಮು ಮತ್ತು ಕಾಶ್ಮೀರ, ಕೇರಳ, ನಾಗಾಲ್ಯಾಂಡ್, ಪಂಜಾಬ್, ತೆಲಂಗಾಣ, ಉತ್ತರಾಖಂಡ ಮತ್ತು ಉತ್ತರ ಪ್ರದೇಶದ 10 ರಾಜ್ಯಗಳಲ್ಲಿ ಹರಡಿವೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.