ಭೋಪಾಲ್: ಮಧ್ಯಪ್ರದೇಶದ 28 ವಿಧಾನಸಭಾ ಚುನಾವಣೆಗಳಿಗೆ ನವೆಂಬರ್ 3ರಂದು ಮತದಾನ ನಡೆದಿದ್ದು, ಇಂದು ಫಲಿತಾಂಶ ಘೋಷಣೆಯಾಗಿದೆ. ಬಿಜೆಪಿ ಅಭೂತಪೂರ್ವವಾದ ಗೆಲುವನ್ನು ತನ್ನದಾಗಿಸಿಕೊಂಡಿದೆ.
28 ಸ್ಥಾನಗಳಲ್ಲಿ ಬಿಜೆಪಿಗೆ 21 ಸ್ಥಾನಗಳು ಲಭಿಸಿವೆ. ಈ ಮೂಲಕ ಶಿವರಾಜ್ ಚೌಹಾನ್ ಅವರ ನೇತೃತ್ವದ ಬಿಜೆಪಿ ಸರಕಾರದ ಭವಿಷ್ಯ ಸ್ಥಿರವಾಗಿದೆ.
ಉಪಚುನಾವಣೆಯಲ್ಲಿ ಅತ್ಯಧಿಕ ಸ್ಥಾನಗಳನ್ನು ಗೆದ್ದು ಮತ್ತೆ ಸರ್ಕಾರ ರಚಿಸುವ ಆಸೆಯಲ್ಲಿದ್ದ ಕಮಲ್ನಾಥ್ ನೇತೃತ್ವದ ಕಾಂಗ್ರೆಸ್ ಪಕ್ಷಕ್ಕೆ ಭಾರೀ ಮುಖಭಂಗವಾಗಿದೆ.
ಬಿಜೆಪಿಗೆ ಈ ಉಪ ಚುನಾವಣೆಯಲ್ಲಿ ಕನಿಷ್ಠ 10 ಸ್ಥಾನಗಳನ್ನು ಗೆಲ್ಲುವುದು ಅನಿವಾರ್ಯವಾಗಿತ್ತು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.