ಮುಂಬಯಿ: ಬುಧವಾರ ಬಂಧಿತರಾದ ರಿಪಬ್ಲಿಕ್ ಮೀಡಿಯಾ ನೆಟ್ವರ್ಕ್ನ ಪ್ರಧಾನ ಸಂಪಾದಕ ಅರ್ನಾಬ್ ಗೋಸ್ವಾಮಿಯವರ ಮಧ್ಯಂತರ ಜಾಮೀನನ್ನು ಬಾಂಬೆ ಹೈಕೋರ್ಟ್ ನಿನ್ನೆ ನಿರಾಕರಿಸಿದೆ. ಈ ಹಿನ್ನೆಲೆಯಲ್ಲಿ ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ ಅರ್ನಬ್ ಗೋಸ್ವಾಮಿ ಈಗ ಸುಪ್ರೀಂ ಕೋರ್ಟ್ಗೆ ಕದ ತಟ್ಟಿದ್ದಾರೆ.
ಇನ್ನೊಂದೆಡೆ ಅರ್ನಬ್ ಅವರ ಸುರಕ್ಷತೆಗೆ ಸಂಬಂಧಿಸಿದಂತೆ ಕಳವಳವನ್ನು ವ್ಯಕ್ತಪಡಿಸಿರುವ ಬಿಜೆಪಿ ನಾಯಕರು ಮಹಾರಾಷ್ಟ್ರ ರಾಜ್ಯಪಾಲರನ್ನು ಭೇಟಿಯಾಗಿ ಚರ್ಚೆ ನಡೆಸಿದ್ದಾರೆ.
ಮಾತ್ರವಲ್ಲದೇ, ಮಹಾರಾಷ್ಟ್ರದಲ್ಲಿ ಪತ್ರಿಕಾ ಸ್ವಾತಂತ್ರ್ಯದ ಹರಣ ಮತ್ತು ಅರ್ನಬ್ ಬಂಧನದ ವಿರುದ್ಧ ಹೋರಾಟ ನಡೆಸುವ ಎಚ್ಚರಿಕೆಯನ್ನು ರವಾನಿಸಿದೆ.
ಅಲ್ಲದೇ, ರಿಪಬ್ಲಿಕ್ ಟಿವಿಯ ಮತ್ತೊಬ್ಬ ಮುಖಂಡ ಘನ್ಶ್ಯಾಮ್ ಸಿಂಗ್ ಅವರನ್ನು ನ್ಯಾಯಾಲಯದಲ್ಲಿ ಹಾಜರುಪಡಿಸಿದ ನಂತರ 3 ದಿನಗಳ ಪೊಲೀಸ್ ಕಸ್ಟಡಿಗೆ ವಿಧಿಸಲಾಗಿದೆ. ಅವರ ಮುಖವನ್ನು ಕಪ್ಪು ಬಟ್ಟೆಯಿಂದ ಮುಚ್ಚಿ ಅಪರಾಧ ದಳ ಬಂಧಿಸಿದೆ. ಈ ರೀತಿಯ ನಡವಳಿಕೆಗೂ ಭಾರೀ ವಿರೋಧ ವ್ಯಕ್ತವಾಗಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.