ಬೆಂಗಳೂರು: ರಾಜ್ಯಸಭಾ ಸದಸ್ಯ ಅಶೋಕ್ ಗಸ್ತಿ ಅವರ ನಿಧನದಿಂದ ತೆರವಾಗಿರುವ ಸ್ಥಾನಕ್ಕೆ ಡಿ. 1 ರಂದು ಉಪಚುನಾವಣೆ ನಡೆಯಲಿದೆ.
ಈ ಹಿನ್ನೆಲೆಯಲ್ಲಿ ವಿಧಾನ ಸಭಾ ಕಾರ್ಯದರ್ಶಿ, ಚುನಾವಣಾಧಿಕಾರಿ ಎಂ ಕೆ ವಿಶಾಲಾಕ್ಷಿ ಅವರು ಮಾಹಿತಿ ನೀಡಿದ್ದು, ಇಂದಿನಿಂದ ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ನಡೆಯಲಿದೆ ಎಂದಿದ್ದಾರೆ. ಜೊತ ಈ ಸಂಬಂಧ ಇಂದು ನೊಟೀಸ್ ಹೊರಡಿಸಲಾಗುವುದಾಗಿಯೂ ಅವರು ಮಾಧ್ಯಮಗಳಿಗೆ ತಿಳಿಸಿದ್ದಾರೆ.
ಉಪ ಚುನಾವಣೆಯಲ್ಲಿ ಸ್ಪರ್ಧಿಸುವ ಅಭ್ಯರ್ಥಿಗಳಿಗೆ ನ. 18 ರ ವರೆಗೆ ನಾಮಪತ್ರ ಸಲ್ಲಿಕೆಗೆ ಅವಕಾಶವಿದೆ. ನ. 19 ರಂದು ನಾಮಪತ್ರಗಳ ಪರಿಶೀಲನೆ ನಡೆಯಲಿದೆ. ನ. 23 ನಾಮಪತ್ರ ಹಿಂಪಡೆಯಲು ಕೊನೆಯ ದಿನವಾಗಿದೆ ಎಂದು ವಿಶಾಲಾಕ್ಷಿ ತಿಳಿಸಿದ್ದಾರೆ. ಡಿ. 1 ರಂದು ವಿಧಾನ ಸೌಧದ ಕೊಠಡಿ ಸಂಖ್ಯೆ 106 ರಲ್ಲಿ ಬೆಳಗ್ಗೆ 9 ರಿಂದ ಸಂಜೆ 4 ಗಂಟೆಯ ವರೆಗೆ ಮತದಾನ ಪ್ರಕ್ರಿಯೆ ನಡೆಯಲಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.