ಬೆಂಗಳೂರು: ಸರ್ಕಾರಿ ಸಾರಿಗೆ ಸಂಸ್ಥೆ ಬಿಎಂಟಿಸಿ ರಾಜ್ಯದಲ್ಲಿ ಓಡಿಸುವ ಸಲುವಾಗಿ 300 ಎಲೆಕ್ಟ್ರಿಕ್ ಬಸ್ಸುಗಳನ್ನು ಪಡೆಯುವುದಾಗಿ ಈ ಹಿಂದೆಯೇ ಮಾಹಿತಿ ನೀಡಿತ್ತು.
ಈ ಬಸ್ಸುಗಳ ಚಾರ್ಜಿಂಗ್ಗಾಗಿ ಸ್ಥಾಪಿಸಲಾಗುವ ಚಾರ್ಜಿಂಗ್ ಸೆಂಟರ್ಗಳಲ್ಲಿ ಖಾಸಗಿ ಎಲೆಕ್ಟ್ರಿಕ್ ವಾಹನಗಳಿಗೂ ಚಾರ್ಜಿಂಗ್ಗೆ ಅವಕಾಶ ನೀಡಿ, ಆರ್ಥಿಕತೆಯನ್ನು ಉನ್ನತಿಗೇರಿಸುವತ್ತ ಬಿಎಂಟಿಸಿ ಚಿಂತನೆ ನಡೆಸಿದೆ. ಈ ಸಂಬಂಧ ಗುತ್ತಿಗೆ ಪಡೆದ ಸಂಸ್ಥೆಯ ಜೊತೆಗೆ ಈ ವ್ಯವಸ್ಥೆಯ ಸಾಧಕ ಭಾದಕಗಳನ್ನು ಪರಿಶೀಲನೆ ಮಾಡಿ ಬಳಿಕ ಈ ನಿಟ್ಟಿನಲ್ಲಿ ತೀರ್ಮಾನ ಕೈಗೊಳ್ಳಲಾಗುವುದು ಎಂದು ಸಂಬಂಧಿಸಿದ ಮೂಲಗಳು ತಿಳಿಸಿವೆ.
ಎಲೆಕ್ಟ್ರಿಕ್ ವಾಹನಗಳ ಬಗ್ಗೆ, ಅವುಗಳ ಚಾರ್ಜಿಂಗ್ ವ್ಯವಸ್ಥೆಯ ಕುರಿತಂತೆ ಸಂಸ್ಥೆ ಹೆಚ್ಚು ಅನುಭವ ಹೊಂದಿಲ್ಲ. ಈ ಹಿನ್ನೆಲೆಯಲ್ಲಿ ಈ ಬಗ್ಗೆ ಕೂಲಂಕುಷವಾಗಿ ಪರಿಶೀಲನೆ ನಡೆಸಿ ಮುಂದಿನ ಕ್ರಮ ತೆಗೆದುಕೊಳ್ಳುವುದಾಗಿಯೂ ಸಂಸ್ಥೆ ಮಾಹಿತಿ ನೀಡಿದೆ. ಕೇಂದ್ರ ಸರ್ಕಾರದ ಫೇಮ್ 2 ಯೋಜನೆಯಡಿ ರಾಜ್ಯ ಸರ್ಕಾರದ ಸಹಾಯಧನ ಬಳಕೆ ಮಾಡಿ 300 ಎಲೆಕ್ಟ್ರಿಕ್ ಬಸ್ಸುಗಳನ್ನು ತೆಲಂಗಾಣ ಮೂಲದ ಕಂಪೆನಿಯಿಂದ ಖರೀದಿಸಲಿರುವುದಾಗಿಯೂ ಸಂಸ್ಥೆ ಈ ಹಿಂದೆ ತಿಳಿಸಿತ್ತು. ಈ ಸಂಬಂಧ ಟೆಂಡರ್ ಪ್ರಕ್ರಿಯೆ ಸಹ ಚಾಲ್ತಿಯಲ್ಲಿದೆ ಎಂದು ಬಿಎಂಟಿಸಿ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.