ನವದೆಹಲಿ: ಬಿಜೆಪಿ ಮತ್ತು ಅದರ ಮಿತ್ರ ಪಕ್ಷಗಳು ಮಂಗಳವಾರ 11 ರಾಜ್ಯಗಳಲ್ಲಿ ನಡೆದ ಉಪಚುನಾವಣೆಯಲ್ಲಿ 59 ಸ್ಥಾನಗಳಲ್ಲಿ 41 ಸ್ಥಾನಗಳನ್ನು ಗೆದ್ದಿದೆ. ವರದಿಯ ಪ್ರಕಾರ, ಬಿಜೆಪಿ ಗಳಿಸಿದ 31 ಸ್ಥಾನಗಳು ಕಾಂಗ್ರೆಸ್ ವಶದಲ್ಲಿತ್ತು. ಈ 31 ಸ್ಥಾನಗಳಲ್ಲಿ ಸುಮಾರು 26 ಸ್ಥಾನಗಳನ್ನು ಬಿಜೆಪಿ ಗುಜರಾತ್ ಮತ್ತು ಮಧ್ಯಪ್ರದೇಶದಲ್ಲಿ ಗೆದ್ದಿದೆ.
ಗುಜರಾತ್ನಲ್ಲಿ ಉಪಚುನಾವಣೆ ನಡೆದ ಎಲ್ಲಾ ಎಂಟು ಸ್ಥಾನಗಳಲ್ಲಿ ಬಿಜೆಪಿ ಕಾಂಗ್ರೆಸ್ ಅನ್ನು ಸೋಲಿಸಿದೆ ಮತ್ತು ಮಧ್ಯಪ್ರದೇಶದಲ್ಲಿ ಈ ಹಿಂದೆ ಕಾಂಗ್ರೆಸ್ ವಶದಲ್ಲಿದ್ದ 19 ಸ್ಥಾನಗಳಲ್ಲಿ 18 ಸ್ಥಾನಗಳನ್ನು ಬಿಜೆಪಿ ಗೆದ್ದುಕೊಂಡಿದೆ.
ಮಣಿಪುರದಲ್ಲಿ ಈ ಹಿಂದೆ ಕಾಂಗ್ರೆಸ್ ಪಕ್ಷ ಹೊಂದಿದ್ದ ಐದು ಸ್ಥಾನಗಳಲ್ಲಿ ನಾಲ್ಕನ್ನು ಬಿಜೆಪಿ ಗೆದ್ದುಕೊಂಡಿದೆ. ಐದನೇ ಸ್ಥಾನವನ್ನು ಸ್ವತಂತ್ರರು ಗೆದ್ದುಕೊಂಡಿದ್ದಾರೆ.
ಉತ್ತರಪ್ರದೇಶದ ಏಳು ಕ್ಷೇತ್ರಗಳ ಉಪ ಚುನಾವಣೆಯಲ್ಲಿ ಆರು ಸೀಟುಗಳನ್ನು ಬಿಜೆಪಿ ಗೆದ್ದುಕೊಂಡಿದ್ದು, ಒಂದು ಸ್ಥಾನ ಮಾತ್ರ ಸಮಾಜವಾದಿ ಪಕ್ಷದ ಪಾಲಾಗಿದೆ. ಕಣದಲ್ಲಿದ್ದ ಬಿಎಸ್ ಪಿ ಮತ್ತು ಕಾಂಗ್ರೆಸ್ ಗೆ ಒಂದು ಸ್ಥಾನ ಕೂಡ ಬಂದಿಲ್ಲ.
ಕರ್ನಾಟಕದ ಎರಡು ವಿಧಾನಸಭಾ ಚುನಾವಣೆಗಳಲ್ಲಿ ಎರಡು ಸ್ಥಾನಗಳನ್ನು ಬಿಜೆಪಿ ಗೆದ್ದುಕೊಂಡಿದೆ. ತೆಲಂಗಾಣದಲ್ಲೂ ಒಂದು ಸ್ಥಾನವನ್ನು ಬಿಜೆಪಿ ಪಡೆದುಕೊಂಡಿದೆ. ನಾಗಾಲ್ಯಾಂಡಿನಲ್ಲಿ ಬಿಜೆಪಿ ಮೈತ್ರಿ ಎನ್ಡಿಪಿಪಿ ಎರಡು ಸ್ಥಾನವನ್ನು ಪಡೆದುಕೊಂಡಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.