ಬೆಂಗಳೂರು: ವಿಧಾನ ಪರಿಷತ್ನ 4 ಕ್ಷೇತ್ರಗಳಿಗೆ (2 ಶಿಕ್ಷಕರ ಕ್ಷೇತ್ರ, 2 ಪದವೀಧರ ಕ್ಷೇತ್ರ) ಅ. 28 ರಂದು ನಡೆದಿದ್ದ ಚುನಾವಣೆಯ ಮತ ಎಣಿಕೆ ಮುಗಿದಿದ್ದು, ಫಲಿತಾಂಶ ಹೊರಬಿದ್ದಿದೆ.
ಬಾಕಿ ಉಳಿದಿದ್ದ ಆಗ್ನೇಯ ಪದವೀಧರ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಮತ ಎಣಿಕೆ ಕಾರ್ಯ ಸಂಪೂರ್ಣವಾಗಿದ್ದು, ಫಲಿತಾಂಶ ಹೊರಬಿದ್ದಿದೆ. ಈ ಕ್ಷೇತ್ರದಲ್ಲಿ ಬಿಜೆಪಿಯ ಚಿದಾನಂದ ಅವರು 24,217 ಮತಗಳನ್ನು ಪಡೆದು ಗೆಲುವಿನ ಪತಾಕೆ ಹಾರಿಸಿದ್ದಾರೆ. ಇವರ ಪ್ರತಿಸ್ಪರ್ಧಿ ಪಕ್ಷೇತರ ಅಭ್ಯರ್ಥಿ ಡಿ ಟಿ ಶ್ರೀನಿವಾಸ ಅವರು ಸೋಲನುಭವಿಸಿದ್ದಾರೆ.
ಪಶ್ಚಿಮ ಪದವೀಧರ ಕ್ಷೇತ್ರದಲ್ಲಿ ಬಿಜೆಪಿಯ ಎಸ್ ವಿ ಸಂಕನೂರ, ಬೆಂಗಳೂರು ಶಿಕ್ಷಕರ ಕ್ಷೇತ್ರದಲ್ಲಿ ಬಿಜೆಪಿಯ ಪುಟ್ಟಣ್ಣ, ಈಶಾನ್ಯ ಶಿಕ್ಷಕರ ಕ್ಷೇತ್ರದಲ್ಲಿ ಬಿಜೆಪಿಯ ಶಶೀಲ್ ನಮೋಶಿ ಅವರು ಜಯಶಾಲಿಗಳಾಗಿದ್ದಾರೆ.
ಒಟ್ಟಿನಲ್ಲಿ ವಿಧಾನ ಪರಿಷತ್ನ 4 ಕ್ಷೇತ್ರಗಳಿಗೆ ನಡೆದಿದ್ದ ಚುನಾವಣೆಯಲ್ಲಿ ಎಲ್ಲಾ ಕ್ಷೇತ್ರಗಳಲ್ಲಿಯೂ ಬಿಜೆಪಿ ವಿಜಯ ಪತಾಕೆ ಹಾರಿಸಿದೆ. ಆ ಮೂಲಕ ಈ ಬಾರಿ ವಿಧಾನ ಪರಿಷತ್ ಚುನಾವಣೆ ಮತ್ತು ರಾಜರಾಜೇಶ್ವರಿ ನಗರ, ಶಿರಾ ಉಪ ಚುನಾವಣೆಗಳು ಬಿಜೆಪಿ ಪಕ್ಷಕ್ಕೆ ವರವಾಗಿ ಪರಿಣಮಿಸಿದೆ ಎಂದರೂ ತಪ್ಪಾಗಲಾರದು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.