ಲಕ್ನೋ: ಉಪಚುನಾವಣೆಯಲ್ಲಿ ಏಳು ಸ್ಥಾನಗಳ ಪೈಕಿ ಆರು ಸ್ಥಾನಗಳಲ್ಲಿ ಬಿಜೆಪಿ ಜಯ ಗಳಿಸುವಂತೆ ಮಾಡಿದ್ದಕ್ಕಾಗಿ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಜನರಿಗೆ ಧನ್ಯವಾದ ಅರ್ಪಿಸಿದ್ದಾರೆ. ಉಪಚುನಾವಣೆಗಳಲ್ಲಿ ಬಿಜೆಪಿಯ ಅಸಾಧಾರಣ ಸಾಧನೆ ಮುಂಬರುವ 2022 ರ ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಪಕ್ಷದ ಗೆಲುವಿನ ಸ್ಪಷ್ಟ ಸೂಚನೆಯನ್ನು ನೀಡುತ್ತದೆ ಎಂದು ಆದಿತ್ಯನಾಥ್ ಹೇಳಿದ್ದರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಮುಖ್ಯಮಂತ್ರಿ, “2017 ರ ವಿಧಾನಸಭಾ ಚುನಾವಣೆ ಮತ್ತು 2019 ರ ಲೋಕಸಭಾ ಚುನಾವಣೆಯಲ್ಲಿನ ತನ್ನ ಕಾರ್ಯಕ್ಷಮತೆಯನ್ನು ಬಿಜೆಪಿ ಪುನರಾವರ್ತಿಸಿದೆ. ಮುಂಬರುವ 2022 ರ ವಿಧಾನಸಭಾ ಚುನಾವಣೆಯಲ್ಲಿ ಪಕ್ಷವು ಮತ್ತೆ ಉತ್ತಮ ಪ್ರದರ್ಶನ ನೀಡಲಿದೆ ಎಂಬುದಕ್ಕೆ ಇದು ಸ್ಪಷ್ಟ ಸೂಚನೆಯಾಗಿದೆ. ಮತ ಚಲಾಯಿಸಲು ಮುಂದೆ ಬಂದಿದ್ದಕ್ಕಾಗಿ ನಾನು ಜನರಿಗೆ ಧನ್ಯವಾದಗಳನ್ನು ತಿಳಿಸುತ್ತೇನೆ” ಎಂದಿದ್ದಾರೆ.
“ರಾಜ್ಯ ಸರ್ಕಾರ ಮತ್ತು ಬಿಜೆಪಿ ಒಟ್ಟಾಗಿ ಒಂದು ತಂಡವಾಗಿ ಕಾರ್ಯನಿರ್ವಹಿಸುತ್ತಿವೆ. ಕರೋನಾ ಸಾಂಕ್ರಾಮಿಕ ಸಮಯದಲ್ಲಿ ಜನರ ಜೀವ ಉಳಿಸಲು ರಾಜ್ಯ ಸರ್ಕಾರವು ಪ್ರಯತ್ನಗಳನ್ನು ಕೈಗೊಂಡಿದೆ , ಸಂಘಟನೆಯಾಗಿ ಬಿಜೆಪಿ ಜನರ ಸೇವೆಗಾಗಿ ಕೆಲಸ ಮಾಡುತ್ತಿದೆ. ಪಕ್ಷದ ಕಾರ್ಯಕರ್ತರು ಮಾಡಿದ ಅದ್ಭುತ ಕಾರ್ಯವು ಉಪಚುನಾವಣೆ ವಿಜಯಕ್ಕೆ ಕಾರಣವಾಗಿದೆ” ಎಂದಿದ್ದಾರೆ.
“ಪ್ರಧಾನಿ ನರೇಂದ್ರ ಮೋದಿಯವರ ಮಾರ್ಗದರ್ಶನದಲ್ಲಿ ಮತ್ತು ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರ ನಾಯಕತ್ವದಲ್ಲಿ ಬಿಜೆಪಿ ದೇಶಾದ್ಯಂತ ಉತ್ತಮ ಪ್ರದರ್ಶನ ನೀಡಿದೆ. ಪ್ರಧಾನಿ ಮೋದಿಯವರ ನಾಯಕತ್ವದಲ್ಲಿ ಮಾತ್ರ ಇಂತಹ ಸಾಹಸಗಳು ಸಾಧ್ಯ ಎಂದು ಉಪ ಚುನಾವಣಾ ಫಲಿತಾಂಶಗಳು ಮತ್ತೆ ಸಾಬೀತುಪಡಿಸಿವೆ. ವಿಶ್ವ ವೇದಿಕೆಯಲ್ಲಿ ಭಾರತದ ಖ್ಯಾತಿಯನ್ನು ನಮ್ಮ ಸರ್ಕಾರ ಹೆಚ್ಚಿಸುತ್ತಿದೆ ಮತ್ತು ಸಮಾಜದ ಪ್ರತಿಯೊಂದು ವರ್ಗದವರ ಕಲ್ಯಾಣಕ್ಕಾಗಿ ಕ್ರಮಗಳನ್ನು ತೆಗೆದುಕೊಳ್ಳುತ್ತಿದೆ, ಜನರು ಪ್ರಧಾನ ಮಂತ್ರಿಯ ನಾಯಕತ್ವದ ಬಗ್ಗೆ ತಮ್ಮ ವಿಶ್ವಾಸವನ್ನು ಮುಂದುವರಿಸಿದ್ದಾರೆ” ಎಂದಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.