ಬೆಂಗಳೂರು: ರಾಜ್ಯದ ಪೊಲೀಸ್ ಇಲಾಖೆಯನ್ನು ಮತ್ತಷ್ಟು ಗಟ್ಟಿಗೊಳಿಸುವ ನಿಟ್ಟಿನಲ್ಲಿ ನಿರ್ಭಯ ಯೋಜನೆಯಡಿಯಲ್ಲಿ 751 ದ್ವಿಚಕ್ರ ವಾಹನಗಳನ್ನು ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರು ಲೋಕಾರ್ಪಣೆ ಮಾಡಿ, ಪೊಲೀಸ್ ಇಲಾಖೆಗೆ ಹಸ್ತಾಂತರ ಮಾಡಿದರು.
ಬಳಿಕ ಮಾತನಾಡಿದ ಅವರು, ಪೊಲೀಸ್ ಇಲಾಖೆಯಲ್ಲಿ ಖಾಲಿ ಇರುವ 16 ಸಾವಿರ ಸಿಬ್ಬಂದಿಗಳ ನೇಮಕಕ್ಕೆ ಅನುಮೋದನೆ ನೀಡಲಾಗುವುದು. ಆ ಮೂಲಕ ಸಿಬ್ಬಂದಿ ಕೊರತೆ ನೀಗಿಸಲು ಕ್ರಮ ಕೈಗೊಳ್ಳುವ ಭರವಸೆಯನ್ನು ಈ ಸಂದರ್ಭದಲ್ಲಿ ನೀಡಿದರು. ಹಾಗೆಯೇ FSL ಲ್ಯಾಬ್ ಸಹ ಸಿದ್ಧಗೊಂಡಿದ್ದು ಶೀಘ್ರದಲ್ಲೇ ಅದನ್ನು ಲೋಕಾರ್ಪಣೆ ಮಾಡುವುದಾಗಿಯೂ ತಿಳಿಸಿದರು.
ನಿರ್ಭಯಾ ಯೋಜನೆಯಡಿ ಇನ್ನೂ ಅನೇಕ ಕ್ರಮಗಳನ್ನು ಸರ್ಕಾರ ಕೈಗೊಳ್ಳಲಿದೆ ಎಂದು ಈ ಸಂದರ್ಭದಲ್ಲಿ ಮುಖ್ಯಮಂತ್ರಿ ತಿಳಿಸಿದರು. ಜೊತೆಗೆ ಸೈಬರ್ ಕ್ರೈಂ ತಡೆಗೆ ಮತ್ತು ಪೊಲೀಸ್ ಇಲಾಖೆಯ ಸುಧಾರಣೆಗೆ ಪೂರಕ ಕ್ರಮಗಳನ್ನು ಸಹ ರಾಜ್ಯ ಸರ್ಕಾರ ತೆಗೆದುಕೊಳ್ಳಲಿದೆ ಎಂದು ಸಿಎಂ ತಿಳಿಸಿದರು.
ಕಾರ್ಯಕ್ರಮದಲ್ಲಿ ಗೃಹ ಸಚಿವ ಬಸವರಾಜ ಬೊಮ್ಮಾಯಿ ಸೇರಿದಂತೆ ಇನ್ನಿತರ ಗಣ್ಯರು ಉಪಸ್ಥಿತರಿದ್ದರು.
ಇಂದು ಬೆಂಗಳೂರಿನಲ್ಲಿ ನಿರ್ಭಯ ಯೋಜನೆಯಡಿಯಲ್ಲಿ ರಾಜ್ಯ ಪೋಲಿಸ್ ಇಲಾಖೆಗೆ 751 ದ್ವಿಚಕ್ರ ವಾಹನಗಳ ಲೋಕಾರ್ಪಣೆ ಸಮಾರಂಭದಲ್ಲಿ ಭಾಗವಹಿಸಲಾಯಿತು. ಮಾನ್ಯ @CMofKarnataka ಸನ್ಮಾನ್ಯ ಶ್ರೀ ಬಿ. ಎಸ್. ಯಡಿಯೂರಪ್ಪ @BSYBJP ಅವರು ದ್ವಿಚಕ್ರ ವಾಹನಗಳನ್ನು ಪೊಲೀಸ್ ಇಲಾಖೆಗೆ ಹಸ್ತಾಂತರಿಸಿದರು.
ಇದೇ ಸಂದರ್ಭದಲ್ಲಿ ಮಾತನಾಡಿ ಪೊಲೀಸ್ ಇಲಾಖೆಯಲ್ಲಿ pic.twitter.com/fg2GfEaB0u— Basavaraj S Bommai (@BSBommai) November 11, 2020
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.