ಬೆಂಗಳೂರು: ಜಗತ್ತಿನ ಪ್ರಖ್ಯಾತ, ಪ್ರಮುಖ ವಿಜ್ಞಾನಿಗಳ ಪಟ್ಟಿಯನ್ನು ಸ್ಟ್ಯಾನ್ಫೋರ್ಡ್ ವಿವಿಯ ವಿಜ್ಞಾನಿಗಳ ತಂಡ ಸಿದ್ಧಪಡಿಸಿ, ಪಿಎಲ್ಒಎಸ್ ಜರ್ನಲ್ನಲ್ಲಿ ಪ್ರಕಟಿಸಿದೆ.
ಜಗತ್ತಿನ ಸುಮಾರು 1 ಲಕ್ಷಕ್ಕೂ ಅಧಿಕ ವಿಜ್ಞಾನಿಗಳ ಹೆಸರು ಈ ಪಟ್ಟಿಯಲ್ಲಿದ್ದು, ಭಾರತದ 1494 ಮಂದಿ ವಿಜ್ಞಾನಿಗಳು ಈ ಪಟ್ಟಿಯನ್ನು ಅಲಂಕರಿಸಿದ್ದಾರೆ. ಈ ಪೈಕಿ ಕರ್ನಾಟಕಕ್ಕೆ ಸಂಬಂಧಿಸಿದಂತೆ 124 ಮಂದಿ ವಿಜ್ಞಾನಿಗಳೂ ಇದರಲ್ಲಿ ಸ್ಥಾನ ಪಡೆದಿದ್ದು, ಅವರಲ್ಲಿ ಹೆಚ್ಚಿನವರು ಬೆಂಗಳೂರಿನ ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ಸೈನ್ಸ್ (ಐಐಎಸ್ಸಿ) ಯಲ್ಲಿ ಕಾರ್ಯ ನಿರ್ವಹಿಸುತ್ತಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಈ ಪಟ್ಟಿಯಲ್ಲಿ ವಿಜ್ಞಾನಿಗಳ ಹೆಸರು, ದೇಶ, ಅವರ ಸಂಶೋಧನೆ, ಕಾರ್ಯಗಳ ಬಗ್ಗೆ ,ಅವರ ಜೀವಮಾನದ ಕೊಡುಗೆಗಳ ಬಗ್ಗೆ ವಿವಿ ಉಲ್ಲೇಖಿಸಿದೆ.
ಕರ್ನಾಟಕಕ್ಕೆ ಸಂಬಂಧಿಸಿದಂತೆ ಐಐಎಸ್ಸಿಯಲ್ಲಿ ಕಾರ್ಯ ನಿರ್ವಹಿಸುವ 93 ಮಂದಿ ವಿಜ್ಞಾನಿಗಳು ಈ ಪ್ರಮುಖ ವಿಜ್ಞಾನಿಗಳ ಪಟ್ಟಿಯಲ್ಲಿ ಸ್ಥಾನ ಪಡೆದಿದ್ದಾರೆ. ಜವಾಹರಲಾಲ್ ನೆಹರು ಸೆಂಟರ್ ಫಾರ್ ಅಡ್ವಾನ್ಸ್ಡ್ ಸೈಂಟಿಫಿಕ್ ರಿಸರ್ಚ್ (ಜೆಎನ್ಸಿಎಎಸ್ಆರ್) ನಲ್ಲಿ ಕಾರ್ಯ ನಿರ್ವಹಿಸುವ 7 ಮಂದಿ ವಿಜ್ಞಾನಿಗಳು ಸಹ ಈ ಪಟ್ಟಿಯಲ್ಲಿ ಇದ್ದಾರೆ.
ರಾಷ್ಟ್ರೀಯ ಜೈವಿಕ ವಿಜ್ಞಾನ ಕೇಂದ್ರದಲ್ಲಿ (ಎನ್ಸಿಬಿಎಸ್) ಕಾರ್ಯ ನಿರ್ವಹಿಸುವ 5 ಮಂದಿ ವಿಜ್ಞಾನಿಗಳು, ಬೆಂಗಳೂರು ವಿಶ್ವವಿದ್ಯಾಲಯದಲ್ಲಿ ಕಾರ್ಯ ನಿರ್ವಹಿಸುವ 4 ಮಂದಿ ವಿಜ್ಞಾನಿಗಳು, ನ್ಯಾಷನಲ್ ಏರೋಸ್ಪೇಸ್ ಲ್ಯಾಬೊರೇಟರೀಸ್ (ಎನ್ಎಎಲ್) 2 ಮಂದಿ ವಿಜ್ಞಾನಿಗಳು, ನ್ಯಾನೊ ಮತ್ತು ಸಾಫ್ಟ್ ಮ್ಯಾಟರ್ ಸೈನ್ಸಸ್ (ಸಿಎನ್ಎಸ್), ಇನ್ಸ್ಟಿಟ್ಯೂಟ್ ಆಫ್ ವುಡ್ ಸೈನ್ಸಸ್ ಅಂಡ್ ಟೆಕ್ನಾಲಜಿ, ಮಣಿಪಾಲ್ ಅಕಾಡೆಮಿ ಆಫ್ ಹೈಯರ್ ಸೈನ್ಸಸ್ ಮತ್ತು ಮೈಸೂರು ವಿಶ್ವವಿದ್ಯಾಲಯ. ರಾಮಯ್ಯ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ, ಜೆಎಸ್ಎಸ್ ವಿಜ್ಞಾನ ಮತ್ತು ತಂತ್ರಜ್ಞಾನ ವಿಶ್ವವಿದ್ಯಾಲಯ ಮತ್ತು ಪ್ರಾಕ್ಸಿಸ್ ಬಿಸಿನೆಸ್ ಶಾಲೆಯಿಂದ ತಲಾ ಒಬ್ಬ ವಿಜ್ಞಾನಿ ಸೇರಿದ್ದಾರೆ ಎಂದು ಮೂಲಗಳು ತಿಳಿಸಿವೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.