ವಿಜಯಪುರ: ಪ್ರಧಾನಮಂತ್ರಿ ಆವಾಸ್ ಯೋಜನೆಯಡಿಯಲ್ಲಿ ನಗರದ ಅಲ್ ಅಮೀನ್ ವೈದ್ಯಕೀಯ ಕಾಲೇಜಿನ ಹಿಂಭಾಗದಲ್ಲಿ 99 ಕೋಟಿ ರೂ. ಅನುದಾನದಲ್ಲಿ ನಿರ್ಮಾಣವಾಗಲಿರುವ 1493 ಮನೆಗಳ ಶಂಕುಸ್ಥಾಪನೆಯನ್ನು ವಸತಿ ಸಚಿವ ವಿ ಸೋಮಣ್ಣ ನೆರವೇರಿಸಿದರು.
ಆವಾಸ್ ಯೋಜನೆಯಡಿ ನಿರ್ಮಾಣ ಆಗಲಿರುವ ಜಿ ಪ್ಲಸ್ ಒನ್ ಮಾದರಿಯ ಮನೆಗಳಿಗೆ ಅಗತ್ಯ ಮೂಲ ಸೌಕರ್ಯಗಳನ್ನು ಒದಗಿಸುವ ನಿಟ್ಟಿನಲ್ಲಿ 10 ಕೋಟಿ ರೂ. ಗಳನ್ನು ಹೆಚ್ಚುವರಿಯಾಗಿ ಒದಗಿಸುವ ಭರವಸೆಯನ್ನು ಅವರು ಇದೇ ಸಂದರ್ಭದಲ್ಲಿ ನೀಡಿದರು. ಅಲ್ಲದೆ ಮುಂದಿನ ಒಂದು ತಿಂಗಳುಗಳ ಒಳಗಾಗಿ ಈ ಯೋಜನೆಯಡಿಯಲ್ಲಿ ನಗರದಲ್ಲಿ ಮತ್ತೆ 2257 ಮನೆಗಳ ನಿರ್ಮಾಣಕ್ಕೆ ಅನುಮೋದನೆ ನೀಡುವ ಭರವಸೆಯನ್ನು ಸಹ ಸೋಮಣ್ಣ ನೀಡಿದರು.
ಇಂತಹ ಯೋಜನೆಗಳು ಸರ್ಕಾರ ಬಡವರಿಗಾಗಿ ಜಾರಿಗೆ ತಂದಿದೆ. ಇವುಗಳನ್ನು ಯಾವುದೇ ಕಾರಣಕ್ಕೂ ಬೇರೆಯವರಿಗೆ ಮಾರಾಟ ಮಾಡುವುದು ಅಥವಾ ದುರುಪಯೋಗ ಮಾಡಿಕೊಳ್ಳುವುದನ್ನು ಮಾಡಬಾರದು ಎಂದು ಅವರು ಫಲಾನುಭವಿಗಳಿಗೆ ಕಿವಿಮಾತು ಹೇಳಿದರು. ಅಲ್ಲದೆ ಮುಂದಿನ ಕೆಲವೇ ವರ್ಷಗಳಲ್ಲಿ ಈ ಪ್ರದೇಶಗಳಿಗೆ ಉತ್ತಮ ಮೌಲ್ಯ ಬರುತ್ತದೆ ಎಂದು ಅವರು ತಿಳಿಸಿದ್ದಾರೆ.
ಜೊತೆಗೆ ಮನೆ ನಿರ್ಮಾಣ ಕಾರ್ಯದಲ್ಲಿ ಗುಣಮಟ್ಟಕ್ಕೆ ಪ್ರಾಮುಖ್ಯತೆ ನೀಡುವಂತೆಯೂ ಅವರು ಗುತ್ತಿಗೆದಾರರಿಗೆ ಸೂಚಿಸಿದ್ದಾರೆ. ಇದರ ಮೇಲುಸ್ತುವಾರಿಯನ್ನು ನೋಡಿಕೊಳ್ಳುವಂತೆ ಸಂಬಂಧಿಸಿದಂತೆ ಇರುವ ಅಧಿಕಾರಿಗಳಿಗೂ ಅವರು ತಿಳಿಸಿದ್ದಾರೆ. ಅದರೊಂದಿಗೆ ಜಿಲ್ಲೆಯ ಅಲೆಮಾರಿ, ಅರೆ ಅಲೆಮಾರಿ, ಸುಡುಗಾಡು ಸಿದ್ಧರಿಗೂ ಸೂಕ್ತ ಸಮೀಕ್ಷೆಯ ಬಳಿಕ ಐದು ಸಾವಿರ ಮನೆಗಳನ್ನು ನಿರ್ಮಿಸಿ ಕೊಡುವ ಭರವಸೆಯನ್ನು ಅವರು ನೀಡಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.