ಬೆಂಗಳೂರು: ಮಾಜಿ ಮುಖ್ಯಮಂತ್ರಿ, ದಿ. ದೇವರಾಜ ಅರಸ್ ಅವರ ಜನ್ಮ ಶತಾಬ್ದಿಯನ್ನು ವರ್ಷಪೂರ್ತಿ ಆಚರಿಸುವುದರೊಂದಿಗೆ ಮರಣೋತ್ತರವಾಗಿ ’ಕರ್ನಾಟಕ ರತ್ನ’ ಪ್ರಶಸ್ತಿ ನೀಡಲು ರಾಜ್ಯ ಸರ್ಕಾರ ತೀರ್ಮಾನಿಸಿದೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ನಡೆದ ಉನ್ನತ ಸಭೆ ಬಳಿಕ ಈ ತೀರ್ಮಾನ ಕೈಗೊಂಡಿದೆ. ಮರಣೋತ್ತರವಾಗಿ ಕರ್ನಾಟಕ ರತ್ನ ನೀಡುವ ಅವಕಾಶವಿಲ್ಲದ ಕಾರಣ ಅದರ ಮಾರ್ಗಸೂಚಿಯನ್ನು ತಿದ್ದುಪಡಿ ಮಾಡುವಂತೆ ಸರ್ಕಾರ ಕನ್ನಡ ಮತ್ತು ಸಂಸ್ಕೃತಿ ಇಲಾಖೆಗೆ ಸೂಚಿಸಿದೆ ಎಂದು ಸಮಾಜ ಕಲ್ಯಾಣ ಸಚಿವ ಎಚ್. ಆಂಜನೇಯ ತಿಳಿಸಿದ್ದಾರೆ.
ವರ್ಷಪೂರ್ತಿ ನಡೆಯಲಿರುವ ಜನ್ಮ ಶತಾಬ್ದಿಯನ್ನು ಅರಸು ಅವರ ಹುಟ್ಟೂರಾದ ಮೈಸೂರಿನ ಹುಣಸೂರು ತಾಲೂಕು ಕಲ್ಲಹಳ್ಳಿಯಲ್ಲಿ ಆ.20ರಂದು ಉದ್ಘಾಟನೆಗೊಳ್ಳಲಿದೆ. ರಾಷ್ಟ್ರೀಯ ಸಮಾವೇಶದೊಂದಿಗೆ 2016ರ ಆ.20 ಸಮಾರೋಪ ಸಮಾರಂಭ ನಡೆಯಲಿದೆ ಎಂದು ಅವರು ಹೇಳಿದ್ದಾರೆ.
ಅವರ ಹುಟ್ಟೂರು ಕಲ್ಲಹಳ್ಳಿಯನ್ನು ಸರ್ಕಾರ ದತ್ತು ಪಡೆದು ಅಭಿವೃದ್ಧಿಪಡಿಸಲಿದೆ. ಮೈಸೂರು ದಸರಾ ಸಂದರ್ಭದಲ್ಲಿ ಅರಸ್ ಅವರ ಸಾಧನೆಗಳನ್ನು ಬಿಂಬಿಸುವ ಸ್ತಬ್ದಚಿತ್ರ ನಿರ್ಮಿಸಲಾಗುವುದು. ಮೈಸೂರು ವಿ.ವಿ.ಯನ್ನು ಮೂರು ವಿಭಾಗವಾಗಿ ವಿಂಗಡಿಸಿ ಒಂದು ವಿ.ವಿ.ಗೆ ದೇವರಾಜ ಅರಸು ಹೆಸರನ್ನು ನಾಮಕರಣ ಮಾಡಲಾಗುವುದು ಎಂದು ತಿಳಿಸಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.