ಬೆಂಗಳೂರು: ಮುಂದಿನ ದಿನಗಳಲ್ಲಿ ರಾಜ್ಯದಲ್ಲಿನ ಪ್ರಾಥಮಿಕ ಆರೋಗ್ಯ ಕೇಂದ್ರಗಳು ದಿನದ 24 ಗಂಟೆಯೂ ಕಾರ್ಯನಿರ್ವಹಿಸುವಂತೆ ಕ್ರಮ ಕೈಗೊಳ್ಳಲಾಗುವುದು. ಜೊತೆಗೆ ವಿಶ್ವ ಬ್ಯಾಂಕ್ ನೆರವಿನಿಂದ ಹೊಸ ಆರೋಗ್ಯ ಕೇಂದ್ರಗಳ ಸ್ಥಾಪನೆಗೂ ಕ್ರಮ ಕೈಗೊಳ್ಳಲಾಗುವುದು ಎಂದು ಸಚಿವ ಡಾ. ಸುಧಾಕರ್ ತಿಳಿಸಿದ್ದಾರೆ.
ಈ ವಿಚಾರಕ್ಕೆ ಸಂಬಂಧಿಸಿದಂತೆ ಇರುವ ರೀತಿ ನೀತಿ, ನಿಯಮಗಳಲ್ಲಿಯೂ ಅಗತ್ಯ ಬದಲಾವಣೆಗಳನ್ನು ಮಾಡುವುದಾಗಿ ಅವರು ತಿಳಿಸಿದ್ದಾರೆ. ಸದ್ಯ ರಾಜ್ಯದಲ್ಲಿ 2300 ಕ್ಕೂ ಅಧಿಕ ಪ್ರಾಥಮಿಕ ಆರೋಗ್ಯ ಕೇಂದ್ರಗಳಿವೆ. 30 ಸಾವಿರ ಜನರಿಗೆ ಒಂದು ಆರೋಗ್ಯ ಕೇಂದ್ರ ಇರಬೇಕು ಎಂಬ ನಿಯಮಗಳಿವೆ. ಆದರೆ, ಕೆಲ ಜಿಲ್ಲೆಗಳಲ್ಲಿ ಸರಿಯಾಗಿ ಆಸ್ಪತ್ರೆಗಳಿಲ್ಲ. ಈ ಹಿನ್ನೆಲೆಯಲ್ಲಿ ಆಸ್ಪತ್ರೆಗಳ ನಿರ್ಮಾಣಕ್ಕೆ ಪೂರಕ ಕ್ರಮ ಕೈಗೊಳ್ಳುವ ಭರವಸೆಯನ್ನು ಸಚಿವರು ನೀಡಿದ್ದಾರೆ.
ರಾಜ್ಯದಲ್ಲಿ ಗುಣಮಟ್ಟದ ಸೇವೆ ನೀಡುವುದಕ್ಕೆ ಅನುಗುಣವಾಗಿ, ಸೇವೆಯಲ್ಲಿ ಯಾವುದೇ ರೀತಿಯ ರಾಜಿಗೆ ಅವಕಾಶವಿಲ್ಲದಂತೆ ಪ್ರಾಥಮಿಕ ಆರೋಗ್ಯ ಕೇಂದ್ರ, ದೊಡ್ಡಾಸ್ಪತ್ರೆಗಳ ನಿಯಮಗಳನ್ನು ರೂಪಿಸಲಾಗುತ್ತದೆ. ಆರೋಗ್ಯ ಸಿಬ್ಬಂದಿಗಳು ಸೇವೆ ಸಲ್ಲಿಸುವ ಪ್ರದೇಶದ ಅನುಗುಣವಾಗಿ ಅವರ ಭಡ್ತಿ, ವೇತನ, ಮಕ್ಕಳ ಶಿಕ್ಷಣಕ್ಕೆ ಪೂರಕವಾದ ನೀತಿಗಳನ್ನು ರೂಪಿಸಲಾಗುವುದು ಎಂದು ಸಚಿವರು ಮಾಹಿತಿ ನೀಡಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.