ಬೆಂಗಳೂರು: ನ. 17 ರಿಂದ ತೊಡಗಿದಂತೆ ಶಿಕ್ಷಕರ ವರ್ಗಾವಣೆ ಪ್ರಕ್ರಿಯೆ ತೊಡಗಲಿದ್ದು, ಈ ಸಂಬಂಧ ವೇಳಾಪಟ್ಟಿ ಪ್ರಕಟವಾಗಿದೆ.
ಹಿಂದಿನ ಸಾಲಿನಲ್ಲಿ ಕಡ್ಡಾಯವಾಗಿ ಹಾಗೂ ಹೆಚ್ಚುವರಿ ಹುದ್ದೆಯಡಿ ವರ್ಗಾವಣೆಯಾದವರಿಗೆ, ಈ ಬಾರಿಯ ವರ್ಗಾವಣೆ ಪ್ರಕ್ರಿಯೆಯಲ್ಲಿ ಪ್ರಥಮ ಆದ್ಯತೆ ನೀಡಲಾಗುವುದು ಎಂದು ಸರ್ಕಾರ ಮಾಹಿತಿ ನೀಡಿದೆ. ವರ್ಗಾವಣೆಗಾಗಿ ಶಿಕ್ಷಕ ಮಿತ್ರ ಅಪ್ಲಿಕೇಶನ್ನಲ್ಲಿ ನ. 30 ರ ವರೆಗೆ ಅರ್ಜಿ ಸಲ್ಲಿಸಲು ಅವಕಾಶವಿದೆ.
ಡಿ. 1-11 ರ ವರೆಗೆ ಸಲ್ಲಿಸಲಾದ ಅರ್ಜಿಗಳ ಪರಿಶೀಲನೆ, ಡಿ. 15 ರಂದು ಅರ್ಹ, ಅನರ್ಹರ ಪಟ್ಟಿ ಬಿಡುಗಡೆ ಮಾಡಲಾಗುತ್ತದೆ. ಡಿ. 16-23 ರ ವರೆಗೆ ಆಕ್ಷೇಪಣೆಗೆ ಅವಕಾಶ, ಡಿ. 24-29 ರ ವರೆಗೆ ಅನರ್ಹರಿಗೆ ಹೇಳಿಕೆ ನೀಡಲು ಅವಕಾಶ ಒದಗಿಸಲಾಗಿದೆ. ಡಿ. 31 ರಂದು ವರ್ಗಾವಣೆ ಪ್ರಕ್ರಿಯೆಯ ಅಂತಿಮ ಪಟ್ಟಿ ಪ್ರಕಟಿಸಲಾಗುವುದು.
ಮೊದಲ ಹಂತದಲ್ಲಿ ಜಿಲ್ಲೆಗೆ ಸಂಬಂಧಿಸಿದಂತೆ, ಎರಡನೇ ಹಂತದಲ್ಲಿ ಬೇರೆ ಜಿಲ್ಲೆಯ ವಿಭಾಗದ ಒಳಗಿನ ಮತ್ತು ಕೊನೆಯ ಹಂತದಲ್ಲಿ ವಿಭಾಗದ ಹೊರಗಿನ ಅರ್ಜಿಗಳ ಕೌನ್ಸಿಲಿಂಗ್ ನಡೆಯಲಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.