ವಾಷಿಂಗ್ಟನ್: ಭಾರತದ ರಾಷ್ಟ್ರೀಯ ಪಕ್ಷ ಕಾಂಗ್ರೆಸ್ನ ‘ಯುವ ನಾಯಕ’ ರಾಹುಲ್ ಗಾಂಧಿ ಅವರ ವ್ಯಕ್ತಿತ್ವಕ್ಕೆ ಸಂಬಂಧಿಸಿದಂತೆ ಅಮೆರಿಕದ ಮಾಜಿ ಅಧ್ಯಕ್ಷ ಬರಾಕ್ ಒಬಾಮಾ ಅವರು ತಮ್ಮ ಎ ಪ್ರಾಮಿಸ್ಡ್ ಲ್ಯಾಂಡ್ ಪುಸ್ತಕದಲ್ಲಿ ಬರೆದಿದ್ದಾರೆ.
ತಮ್ಮ ಮತ್ತು ವಿಶ್ವದ ಅನೇಕ ನಾಯಕರ ಕುರಿತಾದಂತೆ ಇರುವ ಈ ಪುಸ್ತಕದಲ್ಲಿ ರಾಹುಲ್ ಗಾಂಧಿ ಅವರ ಬಗ್ಗೆಯೂ ಬರೆದಿರುವ ಅವರು, ರಾಹುಲ್ ಗಾಂಧಿ ಅವರು ಸಂಪೂರ್ಣವಾಗಿ ರೂಪುಗೊಳ್ಳದ ವ್ಯಕ್ತಿತ್ವವನ್ನು ಹೊಂದಿರುವ, ನರ್ವಸ್ ವ್ಯಕ್ತಿ ಎಂದು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
ಅವರು ಟ್ಯೂಷನ್ಗಳನ್ನು ಪಡೆದುಕೊಂಡು ಶಿಕ್ಷಕರನ್ನು ಮೆಚ್ಚಿಸಲು ನೋಡುವ ವಿದ್ಯಾರ್ಥಿಯಂತೆ. ಅವರಿಗೆ ಪ್ರಬುದ್ಧತೆಯಾಗಲಿ, ವಿಷಯಗಳ ಬಗ್ಗೆ ಪಾಂಡಿತ್ಯ ಹೊಂದಬೇಕು, ಜ್ಞಾನ ಸಂಪಾದನೆ ಮಾಡಬೇಕು ಎಂಬ ಯಾವುದೇ ರೀತಿಯ ಹಸಿವಿಲ್ಲ. ಅವರ ಅಂತರಾಳದಲ್ಲಿ ಬದ್ಧತೆಯೂ ಇಲ್ಲ ಎಂದು ಒಬಾಮಾ ತಮ್ಮ ಅಭಿಪ್ರಾಯವನ್ನು ಮುಕ್ತವಾಗಿ ಬರೆದುಕೊಂಡಿದ್ದಾರೆ.
2014 ರಲ್ಲಿ ಒಬಾಮಾ ಅವರು ಅಮೆರಿಕ ಅಧ್ಯಕ್ಷರಾಗಿದ್ದ ಸಂದರ್ಭದಲ್ಲಿ ಭಾರತಕ್ಕೆ ಭೇಟಿ ನೀಡಿದ್ದರು. ಇದೇ ಸಂದರ್ಭದಲ್ಲಿ ರಾಹುಲ್ ಗಾಂಧಿ ಅವರನ್ನೂ ಭೇಟಿ ಮಾಡಿದ್ದರು. ಈ ಸಂದರ್ಭದಲ್ಲಿ ಇವರಿಬ್ಬರ ನಡುವೆ ನಡೆದ ಮಾತುಕತೆಯನ್ನಾಧರಿಸಿ ಒಬಾಮ ರಾಹುಲ್ ಮೇಲೆ ತಾವು ಹೊಂದಿರುವ ಅಭಿಪ್ರಾಯವನ್ನು ಈ ಪುಸ್ತಕದಲ್ಲಿ ಬರೆದಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.