ನವದೆಹಲಿ: ಕೇಂದ್ರ ಸರ್ಕಾರ ಹಡಗು ಸಚಿವಾಲಯವನ್ನು, ಬಂದರು, ಹಡಗು ಮತ್ತು ಜಲಮಾರ್ಗಗಳ ಸಚಿವಾಲಯ ಎಂದು ಮರುನಾಮಕರಣ ಮಾಡಿ ಆದೇಶ ಹೊರಡಿಸಿದೆ.
ದೇಶದ ಸಮುದ್ರ ಮಾರ್ಗವು ಆತ್ಮನಿರ್ಭರ ಭಾರತ ನಿರ್ಮಾಣದಲ್ಲಿ ಪ್ರಮುಖ ಭಾಗವಾಗಿದೆ. ಹಡಗು ಸಚಿವಾಲಯ ಬಂದರುಗಳ ಮೇಲುಸ್ತುವಾರಿ ಜವಾಬ್ದಾರಿಯನ್ನು ನೋಡಿಕೊಳ್ಳುತ್ತಿದೆ. ಈ ಹಿನ್ನೆಲೆಯಲ್ಲಿ ಇದೀಗ ಹಡಗು ಸಚಿವಾಲಯಕ್ಕೆ ಮರು ನಾಮಕರಣ ಮಾಡಲಾಗಿದೆ ಎಂದು ಮೂಲಗಳು ತಿಳಿಸಿವೆ.
ಮುಂದಿನ ದಿನಗಳಲ್ಲಿ ಹೆಸರಿಗನುಗುಣವಾಗಿ ಈ ಸಚಿವಾಲಯದ ಕಾರ್ಯ ವ್ಯಾಪ್ತಿಯನ್ನು ಸಹ ವಿಸ್ತರಣೆ ಮಾಡಲಾಗುವುದು. ಈ ಮರುನಾಮಕರಣ ಸಚಿವಾಲಯದ ಜವಾಬ್ದಾರಿ ಮತ್ತು ಕಾರ್ಯ ವೈಖರಿಗೂ ಹೆಚ್ಚಿನ ಸ್ಥಿರತೆ ಮತ್ತು ಸ್ಪಷ್ಟತೆಯನ್ನು ನೀಡಲಿದೆ ಎಂದು ಕೇಂದ್ರ ಸರ್ಕಾರ ಮಾಹಿತಿ ನೀಡಿದೆ.
ದೇಶದಲ್ಲಿ ಸರಕು ಸಾಗಾಟಕ್ಕೆ ಸಂಬಂಧಿಸಿದಂತೆ ಜಲಮಾರ್ಗಗಳ ಬಳಕೆ ವೆಚ್ಚ ತಗ್ಗಿಸಲು ಉತ್ತಮ ಪರಿಹಾರವೂ ಹೌದು. ಈ ಹಿಂದೆ ಜಲಮಾರ್ಗಗಳ ಮೂಲಕ ಸರಕು ಸಿಗಾಟ ವ್ಯವಸ್ಥೆ ದೇಶದಲ್ಲಿ ಇರಲಿಲ್ಲ. 2014 ರ ನಂತರ ಈ ಹಿನ್ನೆಲೆಯಲ್ಲಿಯೂ ಪೂರಕ ಕ್ರಮ ಕೈಗೊಳ್ಳಲಾಗಿದೆ. ಸಾಗರಮಾಲಾ ಯೋಜನೆಯಡಿ 500 ಯೋಜನೆಯನ್ನು ಸರ್ಕಾರ ಹಾಕಿಕೊಂಡಿದೆ. ಹೊಸ ಬಂದರುಗಳ ನಿರ್ಮಾಣಕ್ಕೂ ಕೇಂದ್ರ ಸರ್ಕಾರ ಬದ್ಧವಾಗಿದೆ ಎಂದು ಸರ್ಕಾರ ಮಾಹಿತಿ ನೀಡಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.