ನವದೆಹಲಿ: ಭದ್ರತಾ ಪಡೆಗಳೊಂದಿಗೆ ದೀಪಾವಳಿಯನ್ನು ಆಚರಿಸುವ ಸಂಪ್ರದಾಯವನ್ನು ಈ ಬಾರಿಯೂ ಪ್ರಧಾನಿ ನರೇಂದ್ರ ಮೋದಿ ಮುಂದುವರೆಸಲಿದ್ದಾರೆ. ಈ ವರ್ಷ ಜೈಸಲ್ಮೇರ್ ಗಡಿ ಪೋಸ್ಟ್ನಲ್ಲಿ ನಿಯೋಜಿತರಾಗಿರುವ ಯೋಧರೊಂದಿಗೆ ಮೋದಿ ದೀಪಾವಳಿ ಆಚರಿಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಪಾಕಿಸ್ಥಾನ ಪ್ರಾಯೋಜಿತ ಭಯೋತ್ಪಾದನೆ ವಿರುದ್ಧ ಭಾರತ ನಿರಂತರವಾಗಿ ಸೆಣಸಾಡುತ್ತಿರುವ ಕಾರಣ ಗಡಿ ಪ್ರದೇಶಕ್ಕೆ ಅವರ ಭೇಟಿ ಮಹತ್ವದ್ದಾಗಿದೆ ಮತ್ತು ವಾಸ್ತವಿಕ ನಿಯಂತ್ರಣ ರೇಖೆಯ (ಎಲ್ಎಸಿ) ಉದ್ದಕ್ಕೂ ಪ್ರಾದೇಶಿಕ ಸಮಗ್ರತೆಯನ್ನು ಬದಲಾಯಿಸುವ ಚೀನಾ ಪ್ರಯತ್ನದ ಈ ಸಂದರ್ಭದಲ್ಲಿ ಭೇಟಿ ಹೆಚ್ಚು ಮಹತ್ವ ಪಡೆದುಕೊಳ್ಳುತ್ತದೆ.
2019ರಲ್ಲಿ ಮೋದಿ ಜಮ್ಮು ಮತ್ತು ಕಾಶ್ಮೀರದ ರಾಜೌರಿಯಲ್ಲಿ ನಿಯೋಜನೆಗೊಂಡಿದ್ದ ಯೋಧರೊಂದಿಗೆ ದೀಪಾವಳಿ ಆಚರಿಸಿ ಸಿಹಿಯನ್ನು ಹಂಚಿದ್ದರು. 2018ರಲ್ಲಿ ಐಟಿಬಿಪಿ ಯೋಧರೊಂದಿಗೆ ಭಾರತ-ಚೀನಾ ಗಡಿಯಲ್ಲಿ ದೀಪಾವಳಿ ಆಚರಿಸಿದ್ದರು. ತಾವು ಪ್ರಧಾನಿಯಾದಂದಿನಿಂದ ಅವರು ಈ ಸಂಪ್ರದಾಯವನ್ನು ಮುಂದುವರೆಸಿಕೊಂಡು ಬಂದಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.