ಬೆಂಗಳೂರು: ಕೊರೋನಾ ಸಂಕಷ್ಟದ ಹಿನ್ನೆಲೆಯಲ್ಲಿ ಈ ಬಾರಿ ರಾಜ್ಯದಲ್ಲಿ ಹಸಿರು ಪಟಾಕಿಗಳನ್ನಷ್ಟೇ ಹಚ್ಚಬಹುದು ಎಂದು ರಾಜ್ಯ ಸರ್ಕಾರ ತಿಳಿಸಿದೆ. ಈ ಹಿನ್ನೆಲೆಯಲ್ಲಿ ಜನರು ರಾತ್ರಿ 8-10 ಗಂಟೆಯ ವರೆಗಿನ ಅವಧಿಯಲ್ಲಿ ಕೇವಲ ಹಸಿರು ಪಟಾಕಿಗಳನ್ನಷ್ಟೇ ಬಳಕೆ ಮಾಡುತ್ತಿರುವರೇ ಎಂಬುದರ ಬಗ್ಗೆ ಗಮನವಿಡುವಂತೆ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ಆದೇಶ ನೀಡಿದೆ.
ಈ ಸಂಬಂಧ ಸ್ಥಳೀಯ ಸಂಸ್ಥೆಗಳು ಮತ್ತು ಪೊಲೀಸ್ ಇಲಾಖೆಗೆ ಈ ಸಂದರ್ಭದಲ್ಲಿ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲು ಹೈಕೋರ್ಟ್ ನಿರ್ದೇಶನ ನೀಡಿದೆ. ಈ ಸಂಬಂಧ ಹೈಕೋರ್ಟ್ಗೆ ವಿಷ್ಣು ಭರತ್ ಎಂಬುವವರು ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ವಿಚಾರಣೆ ನಡೆಸಿದ ಹೈಕೋರ್ಟ್ನ ಮುಖ್ಯ ನ್ಯಾಯಮೂರ್ತಿ ಎ ಎಸ್ ಓಕಾ ಮತ್ತು ವಿಶ್ವನಾಥ್ ಶೆಟ್ಟಿ ಅವರನ್ನೊಳಗೊಂಡ ವಿಭಾಗೀಯ ಪೀಠ ಈ ಆದೇಶವನ್ನು ಹೊರಡಿಸಿದೆ.
ಹಾಗೆಯೇ ಸರ್ಕಾರ ಸೂಚಿಸಿರುವ ಎಲ್ಲಾ ಮಾರ್ಗಸೂಚಿಗಳನ್ನು ಪಟಾಕಿ ಮಾರಾಟಗಾರರು ಅನುಸರಿಸುತ್ತಿದ್ದಾರೆಯೇ? ಎಂಬುದರ ಕುರಿತು ಪರಿಶೀಲಿಸುವಂತೆಯೂ ಕೋರ್ಟ್ ತಿಳಿಸಿದೆ. ಜೊತೆಗೆ ಹಸಿರು ಪಟಾಕಿಗೆ ಸಂಬಂಧಿಸಿದಂತೆ ಸಾರ್ವಜನಿಕರಿಗೆ ಸರಿಯಾದ ಮಾಹಿತಿ ನೀಡುವಂತೆಯೂ ತಿಳಿಸಿದೆ. ಈ ಸಂಬಂಧ ಜಾಹೀರಾತು ನೀಡಬೇಕು ಎಂದು ತಿಳಿಸಿದೆ. ಜೊತೆಗೆ ಶಬ್ದ ಮಾಲಿನ್ಯವಾಗದಂತೆಯೂ ಎಚ್ಚರ ವಹಿಸಲು ಸೂಚಿಸಿದೆ.
ಬೆಂಗಳೂರಿನಂತಹ ಮಹಾನಗರದಲ್ಲಿ ಶಬ್ದ ಮಟ್ಟವನ್ನು ಅಳೆಯಲು ಪೊಲೀಸರ ಜೊತೆಗೆ ಡೆಸಿಬೆಲ್ ಮೀಟರ್ ಲಭ್ಯವಾಗುವಂತೆ ಕೆಎಸ್ಪಿಸಿಬಿ ಖಚಿತಪಡಿಸಿಕೊಳ್ಳುವಂತೆಯೂ ಹೈಕೋರ್ಟ್ ಹೇಳಿದೆ. ನ್ಯಾಯಾಲಯದ ಸಹಿಗೆ ಕಾಯದೆ ಕೆಎಸ್ಪಿಸಿಬಿ ಮತ್ತು ಬಿಬಿಎಂಪಿಯು ನ್ಯಾಯಾಲಯದ ಆದೇಶವನ್ನು ಸಂಬಂಧಿಸಿದಂತೆ ಇರುವ ಅಧಿಕಾರಿಗಳಿಗೆ ತಿಳಿಸುವಂತೆ ಕೋರ್ಟ್ ಸೂಚನೆಯಲ್ಲಿ ತಿಳಿಸಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.