ನವದೆಹಲಿ: ದೇಶದಲ್ಲಿ ದೀಪಾವಳಿ ಹಬ್ಬದ ಸಂಭ್ರಮ ಆರಂಭವಾಗಿದೆ. ಈ ಹಿನ್ನೆಲೆಯಲ್ಲಿ ರಾಷ್ಟ್ರಪತಿ ರಾಮನಾಥ ಕೋವಿಂದ್, ಪ್ರಧಾನಿ ನರೇಂದ್ರ ಮೋದಿ ದೇಶದ ಜನತೆಗೆ ಶುಭಕಾಮನೆಗಳನ್ನು ತಿಳಿಸಿದ್ದಾರೆ.
ಟ್ವೀಟ್ ಮಾಡಿರುವ ರಾಷ್ಟ್ರಪತಿ ಕೋವಿಂದ್, “ದೀಪಾವಳಿಯ ಶುಭ ಸಂದರ್ಭದಲ್ಲಿ, ದೇಶವಾಸಿಗಳಿಗೆ ಮತ್ತು ವಿದೇಶದಲ್ಲಿರುವ ಎಲ್ಲಾ ಭಾರತೀಯರಿಗೆ ಹಾರ್ದಿಕ ಶುಭಾಶಯಗಳನ್ನು ತಿಳಿಸುತ್ತೇನೆ. ಖುಷಿ ಮತ್ತು ಬೆಳಕಿನ ಈ ಮಹಾಪರ್ವ ದೇಶದ ಮನೆಮನೆಯಲ್ಲೂ ಸುಖ, ಶಾಂತಿ ಮತ್ತು ಸಮೃದ್ಧಿಯನ್ನು ತರಲಿ ಎಂದು ನಾನು ಆಶಿಸುತ್ತೇನೆ” ಎಂದಿದ್ದಾರೆ.
ಟ್ವೀಟ್ ಮಾಡಿರುವ ಪ್ರಧಾನಿ ನರೇಂದ್ರ ಮೋದಿ, “ಎಲ್ಲಾ ದೇಶವಾಸಿಗಳಿಗೆ ದೀಪಾವಳಿ ಹಬ್ಬದ ಹಾರ್ದಿಕ ಮಂಗಳ ಕಾಮನೆಗಳು. ಈ ದೀಪಾವಳಿ ಮತ್ತಷ್ಟು ಬೆಳಕು ಮತ್ತು ಸಂತೋಷವನ್ನು ತರಲಿ. ಎಲ್ಲರೂ ಸಮೃದರಾಗಲಿ ಮತ್ತು ಆರೋಗ್ಯವಂತರಾಗಲಿ” ಎಂದಿದ್ದಾರೆ.
ಮೋದಿ ಸಂಪುಟ ಸಚಿವರು ಮತ್ತು ಪ್ರತಿಪಕ್ಷಗಳ ನಾಯಕರು ಕೂಡ ದೇಶದ ಜನತೆಗೆ ದೀಪಾವಳಿಯ ಶುಭಕಾಮನೆಗಳನ್ನು ತಿಳಿಸಿದ್ದಾರೆ.
ಇಂದು ದೇಶದಾದ್ಯಂತ ನರಕ ಚತುರ್ದಶಿಯನ್ನು ಆಚರಣೆ ಮಾಡಲಾಗುತ್ತಿದೆ, ಒಟ್ಟು ಮೂರು ದಿನಗಳ ಕಾಲ ದೀಪಾವಳಿ ಸಂಭ್ರಮಾಚರಣೆ ದೇಶದಲ್ಲಿ ಇರಲಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.