ಬೆಂಗಳೂರು: ಕೊರೋನಾ ಸಂಕಷ್ಟದ ಅವಧಿಯಲ್ಲೇ ಪೂರಕ ಮುಂಜಾಗ್ರತಾ ಕ್ರಮಗಳನ್ನು ತೆಗೆದುಕೊಂಡು ಪದವಿ, ಎಂಜಿನಿಯರಿಂಗ್, ಡಿಪ್ಲೊಮಾ ತರಗತಿಗಳ ಆರಂಭಕ್ಕೆ ಸರ್ಕಾರ ಪೂರಕ ಕ್ರಮಗಳನ್ನು ಕೈಗೊಂಡಿದೆ.
ಸರ್ಕಾರದ ನಿರ್ದೇಶನದಂತೆ ನ. 17 ರಿಂದಲೇ ರಾಜ್ಯದೆಲ್ಲೆಡೆ ಕಾಲೇಜುಗಳು ನೇರ ತರಗತಿಗಳನ್ನು ಆಯೋಜನೆ ಮಾಡಲಿವೆ. ಕಾಲೇಜುಗಳ ಆರಂಭಕ್ಕೆ ಯುಜಿಸಿ ಈಗಾಗಲೇ ಹೊರಡಿಸಿರುವ ಮಾರ್ಗಸೂಚಿಗಳನ್ನು ಅನುಸರಿಸಿಕೊಂಡಂತೆ ತರಗತಿಗಳನ್ನು ನಡೆಸಲು ವಿವಿಗಳು, ಕಾಲೇಜುಗಳು ಸಹ ಸಿದ್ಧತೆ ಮಾಡಿಕೊಂಡಿವೆ.
ಅಂತಿಮ ವರ್ಷದ ವಿದ್ಯಾರ್ಥಿಗಳನ್ನು ಹೊರತುಪಡಿಸಿ ಉಳಿದ ವಿದ್ಯಾರ್ಥಿಗಳಿಗೆ ಆನ್ಲೈನ್ ಮೂಲಕವೇ ತರಗತಿಗಳನ್ನು ನಡೆಸಲಾಗುತ್ತದೆ. ಇನ್ನು ಕಾಲೇಜಿನಲ್ಲಿ ನಡೆಯುವ ನೇರ ತರಗತಿಗಳಿಗೆ ಹಾಜರಾಗುವ ವಿದ್ಯಾರ್ಥಿಗಳು ಕಡ್ಡಾಯವಾಗಿ ಪೋಷಕರಿಂದ ಒಪ್ಪಿಗೆ ಪತ್ರವನ್ನು ತರುವಂತೆಯೂ ಸೂಚನೆ ನೀಡಲಾಗಿದೆ. ಜೊತೆಗೆ ಕಾಲೇಜಿಗೆ ಆಗಮಿಸುವ ಬೋಧಕರು, ಸಿಬ್ಬಂದಿಗಳು, ವಿದ್ಯಾರ್ಥಿಗಳು ಕಡ್ಡಾಯವಾಗಿ ಮೂರು ದಿನಗಳ ಹಿಂದೆಯೇ ಕೊರೋನಾ ಟೆಸ್ಟ್ ಮಾಡಿಸಿಕೊಂಡು ನೆಗೆಟಿವ್ ಇದ್ದರಷ್ಟೇ ಕಾಲೇಜಿಗೆ ಹಾಜರಾಗುವಂತೆ ಸೂಚನೆ ನೀಡಲಾಗಿದೆ. ಜೊತೆಗೆ ಕಾಲೇಜಿನಲ್ಲಿ ಸ್ಯಾನಿಟೈಸೇಶನ್ ಪ್ರಕ್ರಿಯೆ ನಡೆಸಲು, ಸಾಮಾಜಿಕ ಅಂತರ ಕಾಪಾಡಿಕೊಳ್ಳುವದಕ್ಕೂ ಪೂರಕ ಕ್ರಮ ಕೈಗೊಳ್ಳುವಂತೆ ಸರ್ಕಾರ ಕಾಲೇಜುಗಳಿಗೆ ಈಗಾಗಲೇ ಸೂಚಿಸಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.