ನವದೆಹಲಿ: ಬಿಹಾರ ಚುನಾವಣೆಯಲ್ಲಿ ಹೀನಾಯ ಸೋಲು ಕಂಡ ಬಳಿಕ ಕಾಂಗ್ರಸ್ ಪಕ್ಷದೊಳಗೆ ಭಿನ್ನಾಭಿಪ್ರಾಯ ತಲೆದೋರಿದೆ. ಅದರ ಉನ್ನತ ನಾಯಕರು ಈಗ ತಮ್ಮ ಅಸಮಾಧಾನಗಳನ್ನು ತೋಡಿಕೊಳ್ಳಲಾರಂಭಿಸಿದ್ದಾರೆ.
“ಬಿಹಾರ ವಿಧಾನಸಭಾ ಚುನಾವಣೆ ಮತ್ತು ದೇಶದಾದ್ಯಂತ ನಡೆದ ಇತರ ಉಪಚುನಾವಣೆಗಳಲ್ಲಿ ಕಾಂಗ್ರೆಸ್ ಪಕ್ಷದ ಕಳಪೆ ಪ್ರದರ್ಶನಗಳು ಜನರು ಕಾಂಗ್ರೆಸ್ ಪಕ್ಷವನ್ನು ಒಂದು ಪರಿಣಾಮಕಾರಿ ಪರ್ಯಾಯವಾಗಿ ನೋಡುತ್ತಿಲ್ಲ ಎಂಬುದನ್ನು ತೋರಿಸಿದೆ” ಎಂದು ಕಾಂಗ್ರೆಸ್ ಮುಖಂಡ ಕಪಿಲ್ ಸಿಬಲ್ ಹೇಳಿದ್ದಾರೆ.
“ಪಕ್ಷ ಎದುರಿಸುತ್ತಿರುವ ಸಮಸ್ಯೆಗಳನ್ನು ಪರಿಹರಿಸಲು ಪಕ್ಷದ ನಾಯಕತ್ವ ಪ್ರಯತ್ನಿಸುತ್ತಿಲ್ಲ. ಪಕ್ಷಕ್ಕೆ ತನ್ನ ಸಮಸ್ಯೆಗಳ ಬಗ್ಗೆ ಅರಿವಿದೆ, ಆದರೆ ಅದನ್ನು ಗುರುತಿಸಲು ಅದು ಮುಂದೆ ಬರುತ್ತಿಲ್ಲ” ಎಂದಿದ್ದಾರೆ.
‘ಆರು ವರ್ಷಗಳಿಂದ ಕಾಂಗ್ರೆಸ್ ಆತ್ಮಾವಲೋಕನ ಮಾಡಿಕೊಳ್ಳಲಿಲ್ಲ ಎಂದಾದರೆ, ಇನ್ನು ಮುಂದೆ ಯಾವ ಭರವಸೆ ನಮಗೆ ಉಳಿದಿದೆ. ಈಗ ಆತ್ಮಾವಲೋಕನ ಮಾಡುವ ಸಮಯ ಮುಗಿದಿದೆ’ ಎಂದಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.